ಇದೇ ಮಾ.13ರಿಂದ ಆರಂಭವಾಗುವ ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ದೇವಸ್ಥಾನದ ಮುಂಭಾಗ ಆಕರ್ಷಕ ಪೆಂಡಾಲ್ ನಿರ್ಮಾಣವಾಗುತ್ತಿದೆ. ನಗರದಲ್ಲಿನ ದೇವಾಲಯಗಳಿಗೂ ಸುಣ್ಣ-ಬಣ್ಣ ಬಳಿದು ಸಿಂಗರಿಸಲಾಗುತ್ತಿದೆ. ಇತ್ತ ಜನರೂ ಸಹ ಹಬ್ಬದ ಸಿದ್ಧತೆಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಜಾತ್ರೆಗೆ ಮುನ್ನವೇ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು ಸರದಿಯಲ್ಲಿ ನಿಂತು ದರ್ಶನ ಪಡೆಯಲಾರಂಭಿಸಿದ್ದಾರೆ.
January 11, 2025