ಜಿಲ್ಲಾ ಪಂಚಾಯ್ತಿಗಳಲ್ಲೂ ಕಮಲ

ದಾವಣಗೆರೆ, ಜ. 11 – ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಗಟ್ಟಿಯಾಗಿ ಬೇರೂರಿದ್ದರೆ, ಕಾಂಗ್ರೆಸ್ ಮುಳುಗುತ್ತಿ ರುವ ಹಡಗಿನಂತಾಗಿದೆ. ಮುಂದಿನ ದಿನ ಗಳಲ್ಲಿ ಬಿಜೆಪಿ ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆ ಗಳಲ್ಲೂ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ನಾಯಕರು ಜನ ಸೇವಕ್ ಸಮಾ ವೇಶದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯ್ತಿ ಚುನಾವಣೆಯ ನಂತರದಲ್ಲಿ ಆಯೋಜಿಸಲಾಗಿರುವ ಜನಸೇವಕ್ ಸಮಾವೇಶದಲ್ಲಿ ಮಾತನಾ ಡಿದ ಹಲವಾರು ನಾಯಕರು, ಚುನಾ ಯಿತ ಸದಸ್ಯರು ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸ ಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳ ಯೋಜನೆಗಳನ್ನು ಜನರಿಗೆ ದೊರಕಿ ಸುವ ಮೂಲಕ ಪಕ್ಷ ಬಲಪಡಿಸ ಬೇಕೆಂದು ಕಿವಿಮಾತು ಹೇಳಿದರು.

ನೂರಾರು ಗ್ರಾಮಗಳ ಅಭಿವೃದ್ಧಿಗೆ ಕಾರಣವಾದ ಸುವರ್ಣ ಗ್ರಾಮ ಯೋಜನೆಯನ್ನು ಪುನರಾರಂಭಿಸುವಂತೆ ಮುಖ್ಯಮಂತ್ರಿ ಬಳಿ ಒತ್ತಾಯ ಮಾಡಿರು ವುದಾಗಿ ಈ ಸಂದರ್ಭದಲ್ಲಿ ಮಾತನಾ ಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪನವರು ಈ ಹಿಂದೆ ಜಾರಿಗೆ ತಂದಿದ್ದ ಸುವರ್ಣ ಗ್ರಾಮ ಯೋಜನೆಯ ಮೂಲಕ ನೂರಾರು ಗ್ರಾಮಗಳು ಅಭಿವೃದ್ಧಿಯಾಗಿದ್ದವು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಈ ಯೋಜನೆ ನಿಲ್ಲಿಸಿದೆ. ಪಂಚಾಯ್ತಿಗಳಿಗೆ ಕೋಟಿ ರೂ. ನೀಡುವ ಈ ಯೋಜನೆ ಪುನರಾರಂಭಿಸುವಂತೆ ಮುಖ್ಯಮಂತ್ರಿ ಬಳಿ ಮನವಿ ಮಾಡಿಕೊಳ್ಳಲಾಗಿದೆ. ಈ ಯೋಜನೆಯಿಂದ ಆದರ್ಶ ಗ್ರಾಮಗಳು ರೂಪುಗೊಂಡರೆ, ಆದರ್ಶ ನಾಡಿನ ರಚನೆ ಸಾಧ್ಯ ಎಂದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಗ್ರಾಮ ಪಂಚಾಯ್ತಿ ಗೆಲುವಿನ ಮೂಲಕ ಹಳ್ಳಿಗಳಲ್ಲಿ
ಬಿಜೆಪಿ ಬೀಜ ಬಿತ್ತಿದ್ದೇವೆ. ಇದರಿಂದ ಬಿಜೆಪಿ ಹಡಗು ಗಟ್ಟಿಯಾಗಿದ್ದರೆ, ಕಾಂಗ್ರೆಸ್ ಹಡಗು ಮುಳುಗುತ್ತಿದೆ ಎಂದರು.

ಮಧ್ಯ ಪ್ರದೇಶದ ಪಂಚಾಯ್ತಿಯಲ್ಲಿ ಬುಡಕಟ್ಟು ಮಹಿಳೆಯೊಬ್ಬರು ಉತ್ತಮ ಕೆಲಸ ಮಾಡಿದ್ದನ್ನು ಗುರುತಿಸಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ಸ್ವಂತ ಮನೆ, ಆಸ್ತಿ ಇಲ್ಲದ ಕೇವಲ 6,500 ರೂ.ಗಳ ಸ್ಕೂಟರ್ ಹೊಂದಿದ್ದ ಅಶೋಕ್ ಗಸ್ತಿ ಅವರಂತಹ ಕಾರ್ಯಕರ್ತರನ್ನು ರಾಜ್ಯಸಭೆಗೆ ಕಳಿಸಿದ ಪಕ್ಷ ಬಿಜೆಪಿ. ಹೀಗಾಗಿ ಪಕ್ಷದಲ್ಲಿ ಉತ್ತಮ ಕೆಲಸ ಮಾಡುವವರನ್ನು ಗುರುತಿಸುವ ವಿಭಿನ್ನತೆ ಇದೆ ಎಂದವರು ಹೇಳಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, 15ನೇ ಹಣಕಾಸು ಯೋಜನೆಯಡಿ ಗ್ರಾಮ ಪಂಚಾಯ್ತಿಗಳಿಗೆ 31 ಸಾವಿರ ಕೋಟಿ ರೂ. ಬರಲಿದೆ. ಗೆದ್ದ ಸದಸ್ಯರು ಈ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು.

ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮಾತನಾಡಿ, ಕಳೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತಿದೆ. ಮುಂದಿನ ಉಪ ಚುನಾವಣೆಗಳಲ್ಲೂ ಕಾಂಗ್ರೆಸ್ ದೂಳೀಪಟ ಆಗಲಿದೆ ಎಂದು ಭವಿಷ್ಯ ನುಡಿದರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಜಿಲ್ಲೆಯ 1,600ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಜಿಲ್ಲೆಯ 150ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳು ದೊರೆಯಲಿವೆ. ಆಯ್ಕೆಯಾದವರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ವೇದಿಕೆಯ ಮೇಲೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ,  ಶಾಸಕ ಎಸ್.ಎ. ರವೀಂದ್ರನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಎಂ.ಎಸ್.ಐ.ಎಲ್. ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ, ಲಿಡ್ಕರ್ ಅಧ್ಯಕ್ಷ ಪ್ರೊ. ಲಿಂಗಣ್ಣ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ. ರಾಮಚಂದ್ರ, ಜಿ.ಪಂ. ಅಧ್ಯಕ್ಷೆ ಶಾಂತಕುಮಾರಿ, ಮೇಯರ್ ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಬಯಲು ಸೀಮೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಣಬೇರು ಜೀವನಮೂರ್ತಿ, ಜಿ.ಪಂ. ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ್, ಉಪ ಮೇಯರ್ ಸೌಮ್ಯ ನರೇಂದ್ರ, ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ, ಮಾಜಿ ಶಾಸಕರಾದ ಬಿ.ಪಿ. ಹರೀಶ್, ಬಸವರಾಜ ನಾಯ್ಕ, ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಬಿಜೆಪಿ ಮುಖಂಡರಾದ ನಂದೀಶ್, ಕೆ.ಎಸ್. ನವೀನ್, ಸುಧಾ ಜಯರುದ್ರೇಶ್, ಗೀತ, ಜಿ.ಎಂ. ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಸ್ವಾಗತಿಸಿದರು. ಜಗದೀಶ್ ನಿರೂಪಿಸಿದರು.

error: Content is protected !!