ದಾವಣಗೆರೆ ನಗರದ ಪ್ರಮುಖ ರಸ್ತೆಗಳಲ್ಲೊಂದಾದ ಹದಡಿ ರಸ್ತೆಯ ನಿಟುವಳ್ಳಿ ವೃತ್ತದ ಸಮೀಪ ವ್ಯಾಪಾರಿಗಳು ಫುಟ್ಪಾತ್ ಅತಿಕ್ರಮಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ತಮ್ಮದೇ ಜಾಗ ಎಂಬಂತೆ ಬೇಲಿಯನ್ನೂ ನಿರ್ಮಿಸಿಕೊಂಡಿದ್ದಾರೆ. ಪರಿಣಾಮ ಪಾದಚಾರಿಗಳು ರಸ್ತೆಯಲ್ಲಿ ಓಡಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸುವರೇ?
April 1, 2025