ಬಿಜೆಪಿಯ ಗೆಲುವಿನ ನಾಗಾಲೋಟ ತಡೆಯಲು ಯಾರಿಂದಲೂ ಸಾಧ್ಯವಿಲ್ಲ

ಬಿಜೆಪಿಯ ಗೆಲುವಿನ ನಾಗಾಲೋಟ ತಡೆಯಲು ಯಾರಿಂದಲೂ ಸಾಧ್ಯವಿಲ್ಲ - Janathavaniಉಪ ಚುನಾವಣೆಯಲ್ಲಿ ಗೆಲುವು ನಮ್ಮದೇ : ವಿಜಯೇಂದ್ರ ವಿಶ್ವಾಸ

ದಾವಣಗೆರೆ, ಮಾ. 31- ಬಿಜೆಪಿಯ ಗೆಲುವಿನ ನಾಗಾಲೋಟ ತಡೆಯಲು ಯಾವುದೇ ಪಕ್ಷದಿಂದ ಸಾಧ್ಯವಿಲ್ಲ. ಉಪ ಚುನಾವಣೆಯಲ್ಲೂ ಬಿಜೆಪಿ ಜಯದ ನಾಗಾಲೋಟ ಮುಂದುವರೆ ಸಲಿದೆ ಎಂದು ಸಿಎಂ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದಿನ ಉಪ ಚುನಾವಣೆಯಲ್ಲಿ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದ್ದು, ಹಿಂದೆ ಯಾರೂ ಕೂಡ ಊಹಿಸಿರಲಿಲ್ಲ. ಈಗಿನ ಉಪ ಚುನಾವಣೆಗಳಲ್ಲೂ ನಾವೇ ಗೆಲ್ಲುತ್ತೇವೆ ಎಂದು ತಿಳಿಸಿದರು.

ಬೆಳಗಾವಿ ಉಪಚುನಾವಣೆಗೆ ಸಿಡಿ ಪರಿಣಾಮ ಬೀರದು: ಬೆಳಗಾವಿ ಉಪಚುನಾವಣೆ ಮೇಲೆ ಸಿಡಿ ಪ್ರಕರಣ ಯಾವುದೇ ಪರಿಣಾಮ ಬೀರುವುದಿಲ್ಲ.  ಬೆಳಗಾವಿಯಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ. ಅಭಿವೃದ್ಧಿ ಆಧಾರದ ಮೇಲೆ ನಾಯಕತ್ವದ ಆಧಾರದ ಮೇಲೆ ಬೆಳಗಾವಿ ಗೆಲ್ಲುತ್ತೇವೆ. ಯಾವುದೇ ಪ್ರಕರಣಗಳು ಚುನಾವಣೆ ಮೇಲೆ ಪ್ರಭಾವ ಬೀರೋಲ್ಲ ಎಂದು ಹೇಳಿದರು.

ಶೀಘ್ರವೇ ಸಿಡಿ ಪ್ರಕರಣ ಸತ್ಯಾಸತ್ಯತೆ: ಸಿಡಿ ಲೇಡಿ ಪ್ರಕರಣದ ಬಗ್ಗೆ ವಿಜಯೇಂದ್ರ ಪ್ರತಿಕ್ರಿಯಿಸಿ, 28 ದಿನಗಳಿಂದ ನಾನಾ ರೀತಿಯ ಚರ್ಚೆಗಳು ನಡೆಯುತ್ತಲೇ ಇವೆ. ಇದರ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಬಹಳಷ್ಟು ಜನ ಅಭಿಪ್ರಾಯ ಪಟ್ಟಿದ್ದಾರೆ. ಸಿ.ಡಿ ಯುವತಿಗೆ ಬೆದರಿಗೆ ಇರುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಂದಿನ ದಿನಗಳಲ್ಲಿ ಸದ್ಯದಲ್ಲೇ ಇಡೀ ಪ್ರಕರಣದ ಸತ್ಯಾ ಸತ್ಯತೆ ಹೊರ ಬರಲಿದೆ. ಒಂದು ಕಡೆ ಎಸ್‍ಐಟಿ ತನಿಖೆ ಸಾಗಿದೆ. ಪ್ರಕರಣ ಯಾವ ತಿರುವು ಪಡೆ ಯುತ್ತದೆಯೋ ಕಾದು ನೋಡೋಣ ಎಂದರು. 

ಮಸ್ಕಿ ಉಪಚುನಾವಣೆಯಲ್ಲಿ ಜಯಭೇರಿ: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಉಸ್ತುವಾರಿಯನ್ನು ನಾನು ಸೇರಿದಂತೆ ಸಚಿವರಾದ ಶ್ರೀರಾಮುಲು, ರವಿಕುಮಾರ್ ಹೊತ್ತಿದ್ದೇವೆ. ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಮಸ್ಕಿ ಕ್ಷೇತ್ರದ ಜನರು ಕೈಬಿಡುವುದಿಲ್ಲವೆಂಬ ವಿಶ್ವಾಸ, ನಂಬಿಕೆ ಇದೆ. ಮಸ್ಕಿಯಲ್ಲಿ ಪ್ರತಾಪ ಗೌಡ ವಿಜಯಭೇರಿ ಭಾರಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯತ್ನಾಳ್ ಹೇಳಿಕೆಗೆ ತಲೆಕೆಡಿಸಿಕೊಳ್ಳಲ್ಲ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಜವಾಬ್ದಾರಿಯನ್ನು ಪಕ್ಷ ನನಗೆ ನೀಡಿದೆ. ಇಂತಹ ಟೀಕೆ, ಆರೋಪಗಳ ಬಗ್ಗೆ ಗಮನ ಕೊಡುವುದಿಲ್ಲ. ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಎಲ್ಲಾ ಗಮನಿಸುತ್ತಿದ್ದಾರೆ. ಪಕ್ಷ ಸಂಘಟನೆಗೆ ಯಾವುದೇ ರೀತಿಯ ಹಿನ್ನಡೆಯೂ ಆಗುವುದಿಲ್ಲ ಎಂದರು.

error: Content is protected !!