ದಾವಣಗೆರೆ, ಏ.12- ಜಿಲ್ಲೆಯಲ್ಲಿ ಸೋಮವಾರ 40 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ವರದಿಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 29, ಜಗಳೂರು 1, ಚನ್ನಗಿರಿ 4, ಹೊನ್ನಾಳಿ 3 ಹಾಗೂ ಹೊರ ಜಿಲ್ಲೆಯ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. 23 ಜನರು ಸೋಂಕು ಮುಕ್ತರಾಗಿ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 22967 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 22432 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 264 ಜನ ಸಾವನ್ನಪ್ಪಿದ್ದಾರೆ.
December 24, 2024