ಜಿಲ್ಲಾ ಕಾಂಗ್ರೆಸ್ನಿಂದ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರ ಡಿ. ಬಸವರಾಜ್
ದಾವಣಗೆರೆ, ಏ. 14- ವಿಶ್ವಸಂಸ್ಥೆ ಅಂಬೇಡ್ಕರ್ ಜನ್ಮ ದಿನವನ್ನು ವಿಶ್ವ ಜ್ಞಾನ ದಿನವನ್ನಾಗಿ ಘೋಷಿಸಿದೆ. ಆದರೆ ದೇಶ ನಡೆಸುವ ಬಿಜೆಪಿಯವರು ಸಂವಿಧಾನ ವಿರೋಧಿ ಹೇಳಿಕೆ ನೀಡುವ ಮೂಲಕ ಅಂಬೇಡ್ಕರ್ ಅವರನ್ನು ಅವಮಾನಿಸುತ್ತಿದ್ದು, ಇಂತಹವರು ದೇಶ ಮುನ್ನಡೆಸಲು ಅನರ್ಹರು ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ತಿಳಿಸಿದರು.
ಅವರು ನಗರದ ಜಿಲ್ಲಾ ಕಾಂಗ್ರೆಸ್ ವತಿಯಿಂದ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ (ಡಾ. ಶಾಮನೂರು ಶಿವಶಂಕರಪ್ಪ ಭವನ) ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿ ಮಾತನಾಡಿ, ಸಂವಿಧಾನ ವನ್ನು ಗೌರವಿಸುವಂತಹ ಕೆಲಸವನ್ನು ಇಂದಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗ ಳೆರಡೂ ಮಾಡದೇ, ಸಂವಿಧಾನವನ್ನು ಅಗೌರವಿಸುತ್ತಿವೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಜಿಲ್ಲಾ ವಕ್ತಾರರಾದ ಶ್ರೀಮತಿ ನಾಗರತ್ನಮ್ಮ ಮಾತನಾಡಿ, ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ ಫಲದಿಂದಾಗಿ, ಮಹಿಳೆಯರು ಇಂದು ಅನೇಕ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದರು.
ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ರಾಜ್ಯ ಕಾರ್ಯದರ್ಶಿ ಸೋಮ್ಲಾಪುರದ ಹನುಮಂತಪ್ಪ ಮಾತನಾಡಿ, ಅಂಬೇಡ್ಕರ್ ಸಂವಿಧಾನದ ಬಗ್ಗೆ ಗೌರವ ಇಲ್ಲದ ರೀತಿ ನಡೆದುಕೊಳ್ಳುತ್ತಿರುವ ದೇಶವನ್ನು ಆಳುತ್ತಿರುವ ಬಿಜೆಪಿ ವಿರುದ್ಧ ಹರಿಹಾಯ್ದರು.
ಮಹಾನಗರ ಪಾಲಿಕೆ ಸದಸ್ಯ ಕೆ.ಚಮನ್ ಸಾಬ್ ಮಾತನಾಡಿ, ದೇಶವನ್ನು ಅಸಂವಿಧಾನಿ ಕತೆಯಿಂದ ನಡೆಸುತ್ತಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಬೇಕೆಂದರು.
ಕಾಂಗ್ರೆಸ್ ಲೀಗಲ್ ಸೆಲ್ ಅಧ್ಯಕ್ಷ ಪ್ರಕಾಶ್ ಪಾಟೀಲ್ ಮಾತನಾಡಿ ಅಸ್ಪೃಶ್ಯತೆ ಮತ್ತು ಶೋಷಣೆಯಿಂದ ಸಮಾಜವನ್ನು ಮುಕ್ತ ಮಾಡಲು ವಿದ್ಯೆಯಿಂದ ಮಾತ್ರ ಸಾಧ್ಯವೆಂದರು.
ಯುವ ಕಾಂಗ್ರೆಸ್ ಮುಖಂಡ ರಾಕೇಶ್ ಮಾತನಾಡಿ, ಅಂಬೇಡ್ಕರ್ ಅವರ ಜೀವನ ಮತ್ತು ಅವರು ನಡೆದು ಬಂದ ದಾರಿ ಕುರಿತು ತಿಳಿಸಿದರು.
ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಾಗರ್ ಎಂ.ಹೆಚ್. ಮಾತನಾಡಿ, ಅಂಬೇ ಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಪ್ರತಿ ಯೊಬ್ಬರೂ ಅಳವಡಿಸಿಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ಸದಸ್ಯರಾದ ಶ್ವೇತಾ ಶ್ರೀನಿವಾಸ್, ಸವಿತಾ ಗಣೇಶ್, ಸುಧಾ ಮಂಜುನಾಥ್, ಆಶಾ ಉಮೇಶ್, ಮೀನಾಕ್ಷಿ ಜಗದೀಶ್, ಎಸ್.ಮಲ್ಲಿಕಾರ್ಜುನ್, ಹರೀಶ್ ಕೆ.ಎಲ್, ಇಟ್ಟಿಗುಡಿ ಮಂಜುನಾಥ್, ಬಾತಿ ಶಿವಕುಮಾರ್, ಗೋವಿಂದ್ ಹಾಲೇಕಲ್ಲು, ಅಬ್ದುಲ್ ಜಬ್ಬಾರ್, ಹರೀಶ್ ಹೆಚ್., ಮೈನುದ್ಧೀನ್, ದೇವರಹಟ್ಟಿ ಶಫಿ, ಸುಭಾನ್ ಸಾಬ್, ಲಿಯಾಖತ್ ಅಲಿ, ಜಮ್ನಳ್ಳಿ ನಾಗರಾಜ್, ದಾದಾಪೀರ್, ಜಿಕ್ರಿಯಾ ಭಾಗವಹಿಸಿದ್ದರು.