ದಾವಣಗೆರೆ, ಜು.7- ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಹಾಗೂ ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರುಗಳು ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳ ಮನೆಗಳಿಗೆ ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ವೇಳೆ ಶಾಮನೂರು ಮಲ್ಲಿಕಾರ್ಜುನ್ ಅವರು ವೈಯಕ್ತಿಕವಾಗಿ ಮೃತರ ಕುಟುಂಬಗಳಿಗೆ ತಲಾ 10 ಸಾವಿರ ರೂ.ಗಳ ನೆರವು ನೀಡಿದರು.