ದಾವಣಗೆರೆ, ಜು.8- ಪಾಲಿಕೆ ವತಿಯಿಂದ ಅಕ್ರಮವಾಗಿ ಬಡಾವಣೆ ನಿರ್ಮಿಸಲಾಗಿದೆ ಎಂಬ ಕಾಂಗ್ರೆಸ್ ಮುಖಂಡರ ಆರೋಪ ಸತ್ಯಕ್ಕೆ ದೂರವಾದುದು. ಪಾಲಿಕೆ ವ್ಯಾಪ್ತಿಯಲ್ಲಿ ಯಾವ ಬಡಾವಣೆಗಳನ್ನೂ ಅಕ್ರಮವಾಗಿ ನಿರ್ಮಾಣ ಮಾಡಿಲ್ಲವೆಂದು ಪಾಲಿಕೆ ಮೇಯರ್ ಎಸ್.ಟಿ. ವೀರೇಶ್ ಸ್ಪಷ್ಟಪಡಿಸಿದ್ದಾರೆ.
ಪಾಲಿಕೆ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡಾವಣೆಗಳನ್ನು ಅಭಿವೃದ್ಧಿಪಡಿ ಸುವುದು, ಪರಿಶೀಲಿಸುವುದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಕೆಲಸ, ಅದರಂತೆ ಬೆಸ್ಕಾಂ, ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ, ಲೋಕೋಪಯೋಗಿ ಇಲಾಖೆಗಳು ಸ್ಥಳ ಪರಿಶೀಲಿಸಿದ ನಂತರ ಅಂತಿಮವಾಗಿ ಬಡಾವಣೆಗಳನ್ನು ನಿರ್ವಹಣೆ ಮಾಡುವ ಜವಾಬ್ದಾರಿ ಪಾಲಿಕೆಗೆ ಇರುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಪಾಲಿಕೆ ಸದಸ್ಯರು ಹೇಳುವಂತೆ ಯಾವುದೇ ಅಕ್ರಮ ನಡೆದಿಲ್ಲ. ಆ ರೀತಿ ನಡೆದಿದ್ದರೆ ಸೂಕ್ತ ದಾಖಲೆಗಳನ್ನು ಒದಗಿಸಿದರೆ ಕಾನೂನು ಕ್ರಮ ಕೈಗೆೋಳ್ಳುವುದಾಗಿ ವೀರೇಶ್ ತಿಳಿಸಿದರು.
ಅಧಿಕಾರವಿಲ್ಲದ ಕಾರಣ ವಿಚಲಿತರಾಗಿ ಬಿಜೆಪಿ ಮುಖಂಡರ, ಪಾಲಿಕೆ ಸದಸ್ಯರ ವಿರುದ್ಧ ಆರೋಪ ಮಾಡುತ್ತಾ ಬಿಟ್ಟಿ ಪ್ರಚಾರದಲ್ಲಿ ತೆೋಡಗಿದ್ದಾರೆ. ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಾಗರಿಕರಲ್ಲಿ ಗೆೋಂದಲ ಸೃಷ್ಟಿಸಿ, ಬಿಜೆಪಿಗೆ ಮುಜುಗರ ಉಂಟು ಮಾಡುವ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕೂಡಲೇ ವೃಥಾ ಆರೋಪಗಳನ್ನು ಮಾಡುವುದನ್ನು ಬಿಡಿ ಎಂದು ತಾಕೀತು ಮಾಡಿದರು.
ಪಾಲಿಕೆ ವ್ಯಾಪ್ತಿಯ ಆವರಗೆರೆ ಸರ್ವೆ ನಂಬರ್ 220/2 ರಲ್ಲಿ ಪಾಲಿಕೆಯು ಅಕ್ರಮ ಬಡಾವಣೆ ನಿರ್ಮಿಸಿದೆ ಎಂಬ ಕಾಂಗ್ರೆಸ್ ಪಾಲಿಕೆ ಸದಸ್ಯರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.
ತಮ್ಮ ಅಧಿಕಾರವಧಿಯಲ್ಲಿ ಯಾವುದೇ ಭ್ರಷ್ಟಾಚಾರ, ಅಕ್ರಮ, ಅವ್ಯವಹಾರಗಳಿಗೆ ಆಸ್ಪದ ನೀಡುವುದಿಲ್ಲ. ಹೋರಾಟದ ಹಿನ್ನೆಲೆಯಿಂದ ಬಂದಿರುವ ನಾವು ಅಕ್ರಮಗಳಿಗೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಹಂದಿ, ನಾಯಿಗಳ ಸ್ಥಳಾಂತರಕ್ಕೆ ಅಗತ್ಯ ಕ್ರಮ ಕೈಗೆೋಳ್ಳುವ ಬಗ್ಗೆ ಹಂದಿ ಮಾಲೀಕರ ಸಭೆ ಕರೆಯಾಗಿದ್ದು, ಸೂಕ್ತ ನಿರ್ಧಾರ ತೆಗೆದುಕೆೋಳ್ಳುವುದಾಗಿ ತಿಳಿಸಿದರು.
ಅಮರ್ ಜವಾನ್ ಸ್ಮಾರಕ ಉದ್ಘಾಟನಾ ಕಾರ್ಯಕ್ರಮಕ್ಕೆ ತಾವು ಗೈರಾಗಿರುವ ಬಗ್ಗೆ ಕೇಳಲಾದ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮೇಯರ್ ವೀರೇಶ್ ಅವರು, ಅಂದು ದೂರವಾಣಿ ಕರೆ ಮೂಲಕ ದೂಡಾ ಅಧಿಕಾರಿಗಳು ಆಹ್ವಾನ ನೀಡಿದ್ದರಾದರೂ, ತಮಗೆ ಮೊದಲೇ ನಿಗದಿಯಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಬರಲು ಸಾಧ್ಯವಾಗಲಿಲ್ಲ ಎಂದರು.
ಸೈನಿಕರ ಸ್ಮಾರಕ ನಿರ್ಮಾಣ, ಸೈನಿಕರ ಉದ್ಯಾನವನ ನಿರ್ಮಾಣವಾಗಬೇಕೆಂಬ ಬಹುದಿನದ ಕನಸು ತಮ್ಮದಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಎಲ್.ಡಿ. ಗೋಣೆಪ್ಪ, ಉಮಾ ಪ್ರಕಾಶ್, ಗೀತಾ ದಿಳ್ಳೆಪ್ಪ, ಸದಸ್ಯರಾದ ಪ್ರಸನ್ನಕುಮಾರ್, ಕೆ.ಎಂ. ವೀರೇಶ್, ರೇಣುಕಾ ಶ್ರೀನಿವಾಸ್ ಮತ್ತಿತರರಿದ್ದರು.