ದಾವಣಗೆರೆ, ಅ.6- ನಗರದ ಪ್ರತಿ ವಾರ್ಡ್‌ಗಳಲ್ಲಿ ವಾರಕ್ಕೊಮ್ಮೆ ಚರಂಡಿಗಳಿಗೆ ಬ್ಲೀಚಿಂಗ್ ಸಿಂಪರಣೆ ಹಾಗೂ ಫಾಗಿಂಗ್ ಮಾಡುವ ಬಗ್ಗೆ ಮಂಗಳವಾರ ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ನಗರ ಸ್ವಚ್ಛತಾ ಕಾರ್ಯಗ ಳನ್ನು ನಡೆಸುವ ಜೊತೆಗೆ ಡೆಂಗ್ಯೂ ಮತ್ತು ಚಿಕುನ್‌ಗುನ್ಯಾ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಹಾಪೌರರಾದ ಎಸ್.ಟಿ. ವೀರೇಶ್ ತಿಳಿಸಿದರು.
ಈಗಾಗಲೇ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಮನೆ ಮನೆಗೂ ತೆರಳಿ `ಲಾರ್ವಾ’ ಸಮೀಕ್ಷೆ ಆರಂಭಿಸಿದ್ದು, ಸಮೀಕ್ಷೆ ಯಶಸ್ಸಿಗಾಗಿ ಮತ್ತು ಇಲಾಖೆಯೊಂದಿಗೆ ಕೈಜೋಡಿಸಲು ಪಾಲಿಕೆಯಿಂದ 50 ಜನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉಪ ಮಹಾಪೌರರಾದ ಶಿಲ್ಪಾ ಜಯಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಲ್.ಡಿ. ಗೋಣೆಪ್ಪ, ರೇಣುಕಾ ಶ್ರೀನಿವಾಸ್, ಉಮಾ ಪ್ರಕಾಶ್, ಗೀತಾ ದಿಳ್ಳೆಪ್ಪ, ಚಮನ್‌ಸಾಬ್, ಆಯುಕ್ತರಾದ ವಿಶ್ವನಾಥ್ ಪಿ. ಮುದಜ್ಜಿ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನಟರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್, ಪಾಲಿಕೆ ಆರೋಗ್ಯಾಧಿಕಾರಿ ಡಾ. ಸುಧೀಂದ್ರ, ಸಹಾಯಕ ನಿರ್ದೇಶಕ ಡಾ. ಸಂತೋಷ್ ಮತ್ತಿತರರಿದ್ದರು.