ಕರ್ಫ್ಯೂ ಉಲ್ಲಂಘಿಸಿದರೆ ಕಠಿಣ ಕ್ರಮ

ವಾರಾಂತ್ಯದ ಕರ್ಫ್ಯೂ ಲಾಕ್‌ಡೌನ್‌ ಮಾದರಿ: ಬೊಮ್ಮಾಯಿ

ಬೆಂಗಳೂರು, ಏ. 22 – ವಾರಾಂತ್ಯದ ಕರ್ಫ್ಯೂ ಲಾಕ್‍ಡೌನ್ ಮಾದರಿಯಲ್ಲೇ ಕಟ್ಟುನಿಟ್ಟಾಗಿರಲಿದೆ. ಹೊರ ಜಿಲ್ಲೆಗಳ ಪ್ರಮುಖ ರಸ್ತೆಗಳು ಬಂದಾಗಿರುತ್ತವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ವಾರಾಂತ್ಯದ ಕರ್ಫ್ಯೂ ಉಲ್ಲಂಘಿಸಿದರೆ ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ರಾಜ್ಯಾದ್ಯಂತ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಿಂದ 80 ರಷ್ಟು ಹಾಸಿಗೆಗಳನ್ನು ಕೋವಿಡ್-19  ಸೋಂಕಿತರಿಗೆ ಮೀಸಲಿರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಮೈಸೂರು ಜಿಲ್ಲಾ ಪ್ರವಾಸಕ್ಕೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಸುಧಾಕರ್, ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತುರ್ತು ಆರೋಗ್ಯ ಸೇವೆ ಎಂದು ಪರಿಗಣಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮುಖ್ಯಮಂತ್ರಿಯವರು ಕೆಲವು ಕಠಿಣ ತೀರ್ಮಾನಗಳನ್ನು ಕೈಗೊಳ್ಳಲಿದ್ದಾರೆ ಎಂದರು. 

ಈ ನಡುವೆ, ಸೋಂಕು ಸಂದರ್ಭದಲ್ಲಿ ಕಾಂಗ್ರೆಸ್ ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ. 

ದೇಶದಲ್ಲಿ ವೈದ್ಯಕೀಯ ಮೂಲಸೌಕರ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕೊರೊನಾ ಸಾಂಕ್ರಾಮಿಕ ರೋಗವನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದೆ. 

error: Content is protected !!