ಬ್ಲಾಕಿಂಗ್ ದಂಧೆಯಲ್ಲಿ ವೈದ್ಯಕೀಯ ಸೀಟು

ಕಠಿಣ ಕ್ರಮಕ್ಕೆ ಆಗ್ರಹಿಸಿ ಅ.ಭಾ.ವಿ.ಪ ಪ್ರತಿಭಟನೆ

ದಾವಣಗೆರೆ, ಫೆ. 23- ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿ ದವರ ವಿರುದ್ಧ ಕಠಿಣ ಕ್ರಮಕ್ಕೆ  ಆಗ್ರಹಿಸಿ ಸ್ಥಳೀಯ ಎಬಿವಿಪಿ ವತಿಯಿಂದ  ಇಂದು ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂದು ಹೆಗ್ಗಳಿಕೆ ನಮ್ಮೆಲರಿಗೂ ಇದೆ. ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಲು ಆಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದೆಲ್ಲೆಡೆ ಹೋರಾಟ ನಡೆಸಿ, ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಿಸಿತ್ತು. ಆದರೆ, ಇದೀಗ ಕರ್ನಾಟಕದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆಯನ್ನು ಸಾಕ್ಷಿ ಸಮೇತವಾಗಿ ಐಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. 

ಸೀಟುಗಳ ಮಾರಾಟದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಜೊತೆಗೆ ಆದಾಯ ತೆರಿಗೆ ಇಲಾಖೆಯ ಕಾಯ್ದೆಯೂ ಕೂಡ ಇಲ್ಲಿ ಉಲ್ಲಂಘನೆ ಆಗಿದೆ. 

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಸರ್ಕಾರ ಯಾವುದೇ ಒತ್ತಡಗಳಿಗೆ ಮಣಿಯದೆ ಕಠಿಣ ಕ್ರಮ ತೆಗೆದುಕೊಳ್ಳಲು ಆಗ್ರಹಿಸುತ್ತದೆ.

ಅಭಾವಿಪ ಮಹಾನಗರದ ಹೋರಾಟ ಪ್ರಮುಖ್ ವಿಜಯ್, ಸಂಪರ್ಕ ಪ್ರಮುಖ್ ದೊಡ್ಡೇಶ, ಅಭಾವಿಪ ಕಾರ್ಯಕರ್ತರಾದ ಕೊಟ್ರೇಶ್, ಅನಂತ, ವಿಶ್ವ, ಚಂದನ, ಭಾಗ್ಯಲಕ್ಷ್ಮಿ, ರಕ್ಷಿತಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

error: Content is protected !!