ಗ್ರಾಮ ಪಂಚಾಯ್ತಿ ನೌಕರರಿಂದ ಧರಣಿ

ದಾವಣಗೆರೆ, ಜು.18- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಗ್ರಾಮ ಪಂಚಾಯತಿ ನೌಕರರು ಮೊನ್ನೆ ಪ್ರತಿಭಟನಾ ಧರಣಿ ನಡೆಸಿದರು.

ರಾಜ್ಯ ಗ್ರಾಮ ಪಂಚಾ ಯತಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ಜಿಲ್ಲಾ ಸಮಿತಿ ನೇತೃತ್ವ ದಲ್ಲಿ ಕೆಲ ಸಮಯ ಧರಣಿ ನಡೆಸಿದ ಪ್ರತಿಭಟನಾಕಾರರು, ಬಿಲ್ ಕಲೆಕ್ಟರ್ ಮತ್ತು ಗುಮಾಸ್ತ ಹುದ್ದೆಯಿಂದ ಗ್ರೇಡ್ -2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾ ಯಕ ಹುದ್ದೆಗೆ ಬಡ್ತಿ ನೀಡಲು ಹಾಗೂ 15 ನೇ ಹಣಕಾಸು ಯೋಜನೆಯಡಿ ನೀರುಗಂಟಿ ಮತ್ತು ಜಾಡ ಮಾಲಿಗಳಿಗೆ ಬಾಕಿ ವೇತನ ನೀಡುವಂತೆ ಒತ್ತಾ ಯಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

ಸರ್ಕಾರದ ಆದೇಶದಂತೆ 15ನೇ ಹಣಕಾಸು ಯೋಜನೆಯಡಿ ಆಡಳಿತ ವೆಚ್ಚದಲ್ಲಿ ಶೇ.10ರಷ್ಟು ಹಾಗೂ ಸ್ಥಳೀಯ ತೆರಿಗೆ ಸಂಗ್ರಹದಲ್ಲಿ ಶೇ. 40ರಷ್ಟು  ಹಣವನ್ನು ಸಿಬ್ಬಂದಿ ವೇತನಕ್ಕೆ ಉಪಯೋಗಿಸಬೇಕು. ಬಿಲ್ ಕಲೆಕ್ಟರ್ ಹುದ್ದೆಯಿಂದ ಗ್ರೇಡ್ -2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಬಡ್ತಿ ನೀಡಬೇಕು. 

ಸಂಬಳಕ್ಕಾಗಿ 890 ಕೋಟಿ ಹಣದ ಅವಶ್ಯಕತೆಯಿದ್ದು, 518 ಕೋಟಿ ಮಾತ್ರ ಹಿಂದಿನ ಸರ್ಕಾರ ಮಂಜೂರಾತಿ ಮಾಡಿದ್ದು, ಸಂಬಳಕ್ಕಾಗಿ ಬೇಕಾಗಿರುವ 372 ಕೋಟಿ ರೂ . ಮಂಜೂರು ಮಾಡುವಂತೆ ಒತ್ತಾಯಿಸಿದರು. 

ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಎಂ. ಉಮೇಶ್ ಕೈದಾಳೆ, ಪ್ರಧಾನ ಕಾರ್ಯದರ್ಶಿ ಎಸ್.ಸಿ. ಶ್ರೀನಿವಾಸಚಾರ್,  ಸಿಐಟಿಯು ಜಿಲ್ಲಾ ಸಂಚಾಲಕ ಆನಂದರಾಜು, ಗ್ರಾ.ಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಉಮೇಶ್, ಮಹಾಂತೇಶ್, ಗುಡಾಳು ತಿಪ್ಪೇಸ್ವಾಮಿ, ಚಂದ್ರಪ್ಪ, ಭೀಮಾ ನಾಯ್ಕ, ಬೇತೂರು ಬಸವರಾಜ್ ಸೇರಿದಂತೆ, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

error: Content is protected !!