ದಾವಣಗೆರೆ, ಜು.18- ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿ ಗಳಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸಿ ಪರೀಕ್ಷೆ ನಡೆಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ದಾವಣಗೆರೆ ವಿಶ್ವ ವಿದ್ಯಾನಿಲಯದ ಆಡಳಿತ ಕುಲಸಚಿವರಿಗೆ ಇಂದು ಮನವಿ ಸಲ್ಲಿಸಲಾಯಿತು.
ಕೊರೊನಾದಂತಹ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರು ಹಾಗೂ ವಿದ್ಯಾರ್ಥಿ ಸಮುದಾಯವು ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಸಮಸ್ಯೆ ಎದುರಿಸಿದ್ದಾರೆ. ಅದರ ಜೊತೆ ಜೊತೆಯಲ್ಲಿ ಶೈಕ್ಷ ಣಿಕವಾಗಿ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದಾರೆ. ಮೊದಲನೇ ಅಲೆಯಲ್ಲಿ ವಿದ್ಯಾ ರ್ಥಿಗಳು ಆನ್ ಲೈನ್ ನಲ್ಲಿ ಶಿಕ್ಷಣವನ್ನು ಪಡೆದು ಪರೀಕ್ಷೆಯನ್ನು ಬರೆದಿದ್ದಾರೆ. ಎರಡನೇ ಅಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಾಕಷ್ಟು ಆರ್ಥಿಕ ಸಮಸ್ಯೆಗಳು ಉಂಟಾಗಿದ್ದು ಇದರಿಂದಾಗಿ ಕೆಲ ವಿದ್ಯಾರ್ಥಿಗಳು ಶಿಕ್ಷಣವನ್ನು ತೊರೆಯು ವಂತಹ ಸಂದರ್ಭಗಳು ಉಂಟಾಗಿವೆ ಹಾಗೂ ಎರಡನೇ ಅಲೆಯಲ್ಲಿ ಶಿಕ್ಷಣವನ್ನು ಆನ್ ಲೈನ್ ನಲ್ಲಿ ಪಡೆದುಕೊಂಡು, ಈಗ ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗಿದ್ದಾರೆ. ಇಂತಹ ಸಂದರ್ಭ ದಲ್ಲಿ ಹಾಸ್ಟೆಲ್ ವಿದ್ಯಾರ್ಥಿ ಗಳಿಗೆ ಹಾಸ್ಟೆಲ್ ಸೌಲಭ್ಯಗಳನ್ನು ನೀಡದಿ ದ್ದರೆ ವಿದ್ಯಾರ್ಥಿಗಳನ್ನು ಆರ್ಥಿಕ ವಾಗಿ ಇನ್ನಷ್ಟು ಕಷ್ಟದ ಕೂಪಕ್ಕೆ ತಳ್ಳಿ ದಂತಾಗುತ್ತದೆ ಎಂದು ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜೇಂದ್ರ ಬಾಯಾರ್, ವಿವಿಯ ವಿದ್ಯಾರ್ಥಿಗಳಾದ ಸತೀಶ್, ರವೀಂದ್ರ, ನಾಗರಾಜ್ ಸೇರಿದಂತೆ ಇತರರಿದ್ದರು.