ದಾವಣಗೆರೆ, ಜು.22- ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದ ಉಪ ವಿಭಾಗಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಲಾಯಿತು.
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣಕ್ಕೆ ಈಗಾಗಲೇ ಕಾಮಗಾರಿ ಪ್ರಾರಂಭವಾಗಿದ್ದು, ವಿಶ್ವದಲ್ಲಿರುವ ಪ್ರತಿಯೊಬ್ಬ ಕನ್ನಡಿಗರು ಕುವೆಂಪು ವಿಚಾರಧಾರೆಯನ್ನು ಅನುಸರಿಸುತ್ತಿದ್ದಾರೆ. ಆದ ಕಾರಣ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ತಾವುಗಳು ಅನುಮೋದಿಸಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಕರವೇ ಆಗ್ರಹಿಸಿದೆ.
ಶಿವಮೊಗ್ಗದ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಹುಟ್ಟಿ ಬೆಳೆದು ಸಾರ್ಥಕ ಜೀವನ ಮುಗಿಸಿದ ಕುವೆಂಪುರವರ ಸವಿನೆನಪಿಗಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಸರಿಡುವುದು ಸೂಕ್ತ. ವಿಶ್ವಮಾನವ ಸಂದೇಶ ಸಾರುವ ನಿಟ್ಟಿನಲ್ಲಿ ರಾಷ್ಟ್ರಕವಿ ಕುವೆಂಪು ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ವೇದಿಕೆ ಒತ್ತಾಯಿಸಿದೆ.
ಈ ವೇಳೆ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಬಸಮ್ಮ, ಶಾಂತಮ್ಮ, ಮಂಜುಳಮ್ಮ, ಡಿ. ಮಲ್ಲಿಕಾರ್ಜುನ್, ಜಿ.ಎಸ್. ಸಂತೋಷ್, ಎಂ.ಡಿ. ರಫೀಕ್, ಗೋಪಾಲ್ ದೇವರಮನೆ, ಖಾದರ್ ಭಾಷಾ, ನಾಗರಾಜ್, ಕರಿಯಪ್ಪ, ಜಬಿವುಲ್ಲಾ ಸೇರಿದಂತೆ ಇತರರು ಇದ್ದರು.