ತೈಲ ಬೆಲೆ ಏರಿಕೆ ವಿರೋಧಿಸಿ ಸೈಕಲ್ ಜಾಥಾ

ದಾವಣಗೆರೆ, ಜು.29- ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದು, ಅಗತ್ಯ ವಸ್ತುಗಳ ಬೆಲೆಯೂ ಸಹ ಏರಿಕೆ ಯಾಗಿ ಜನಸಾಮಾನ್ಯರು, ಕೃಷಿ ಚಟುವ ಟಿಕೆಗಳ ಮೇಲೆ ತೀವ್ರ ಪರಿಣಾಮ ಬೀರು ತ್ತಿದ್ದು, ಈ ವರ್ಗವೂ ಬೆಲೆ ಏರಿಕೆಯಿಂದಾಗಿ ಬೀದಿಗೆ ಬರುವಂತಾಗಿದೆ ಎಂದು ಜಿ.ಪಂ. ಮಾಜಿ ಸದಸ್ಯ ಕೆ.ಎಸ್. ಬಸವಂತಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ತ್ಯಾವಣಿಗಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಬೃಹತ್ ಸೈಕಲ್ ಜಾಥಾದ ನೇತೃತ್ವ ವಹಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರ್ಗದ ಶ್ರಮಿಕ ವರ್ಗದವರಿಗೆ ಯೋಜನೆಗಳನ್ನು ರೂಪಿಸಿ ಆರ್ಥಿಕವಾಗಿ ಚೇತರಿಸಿಕೊಳ್ಳುವಂತೆ ಮಾಡಲಾಗಿತ್ತು ಎಂದು ಹೇಳಿದರು.

ಜಾಥಾದ ನೇತೃತ್ವವನ್ನು ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್ ವಹಿಸಿದ್ದರು. ಜಿ.ಪಂ. ಮಾಜಿ ಸದಸ್ಯ ಪಿ.ಸಿ.ಗೋವಿಂದಸ್ವಾಮಿ, ತ್ಯಾವಣಿಗೆ ಕಾಂಗ್ರೆಸ್ ಮುಖಂಡ ಲೋಹಿತಪ್ಪ, ಎಸ್.ಸಿ. ಘಟಕದ ಅಧ್ಯಕ್ಷ ಬಿ.ಹೆಚ್.ವೀರಭದ್ರಪ್ಪ, ಕತ್ತಲಗೆರೆ ತಿಪ್ಪಣ್ಣ, ಜಿ.ಪಂ. ಮಾಜಿ ಸದಸ್ಯ ರಾಮಪ್ಪ, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ. ಅಂಜಿನಪ್ಪ, ನಾಗರಾಜ್ ನಾಯ್ಕ, ಲೋಹಿತ್ ನಾಯ್ಕ್, ನಂಜಾನಾಯ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಶಿಕಲಾ, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಿರಣ್,  ತಾ.ಪಂ. ಮಾಜಿ ಸದಸ್ಯರುಗಳಾದ ಹನುಮಂತಪ್ಪ, ಹರೋಸಾಗರ ಪ್ರಕಾಶ್, ತ್ಯಾವಣಿಗೆ ಕ್ಷೇತ್ರದ ತಾ.ಪಂ. ಸದಸ್ಯ ಗೌಡ್ರ ದೊಡ್ಡಘಟ್ಟ ಬಾಲಚಂದ್ರಪ್ಪ, ಗ್ರಾ.ಪಂ. ಸದಸ್ಯರಾದ ರಮೇಶ್, ಇರ್ಷಾದ್, ಶಶಿಕುಮಾರ್ ಹೆಚ್., ಅಲ್ಪಸಂಖ್ಯಾತರ ಅಧ್ಯಕ್ಷ ಹಿದಾಯತ್, ಅಸಂಘಟಿತ ಕಾರ್ಮಿಕರ ಅಧ್ಯಕ್ಷ  ಚಿರಡೋಣಿ ಮಂಜುನಾಥ್, ಜಹೀರ್  ಪಟೇಲ್, ಮಂಜಾನಾಯ್ಕ, ಬೆಳಗೆರೆ ರಾಮಚಂದ್ರಪ್ಪ, ಹೂವಿನಮಡು ಚನ್ನಬಸಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

error: Content is protected !!