ಪಾಲಿಕೆ ವ್ಯಾಪ್ತಿಯಲ್ಲಿ ಡಿಸೆಂಟ್ರಲೈಸ್ಡ್ ಟ್ರಯೇಜ್ ಕೇಂದ್ರ

ದಾವಣಗೆರೆ, ಮೇ 19- ಕೋವಿಡ್  ಸೋಂಕು  ನಿಯಂತ್ರಿಸುವ ನಿಟ್ಟಿನಲ್ಲಿ  ಮಹಾನಗರಪಾಲಿಕೆಯ 45 ವಾರ್ಡ್‍ಗಳ ವ್ಯಾಪ್ತಿಯಲ್ಲಿ ವಿಕೇಂದ್ರೀಕೃತ ಚಿಕಿತ್ಸೆ ನಿರ್ಧರಣೆ ಕೇಂದ್ರ (ಡಿಸೆಂಟ್ರಲೈಸ್ಡ್ ಟ್ರಯೇಜ್ ಸೆಂಟರ್) ಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಸರ್ಕಾರಿ ಹಾಗೂ ಖಾಸಗಿ ವೈದ್ಯರ ಸಹಕಾರ ಅತ್ಯಗತ್ಯ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಹೇಳಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್ ಸೋಂಕಿತರ ಆರೋಗ್ಯ ಮೇಲ್ವಿಚಾರಣೆ ಮಾಡುವ ಸಂಬಂಧ ವೈದ್ಯರುಗಳ ನಿಯೋಜನೆ ಕುರಿತಂತೆ ಬುಧವಾರ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಸೂಚನೆಯಂತೆ ಕೋವಿಡ್ ಸೋಂಕಿತರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆ ಮಾಡುವ ಸಂಬಂಧ ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಆಸ್ಪತ್ರೆಗಳ ಹಂತದಲ್ಲಿ ಡಿಸೆಂ ಟ್ರಲೈಸ್ಡ್ ಟ್ರಯೇಜ್ ಸೆಂಟರ್‍ಗಳನ್ನು ತೆರೆದು, ಭೌತಿಕವಾಗಿ ಚಿಕಿತ್ಸೆ ನಿರ್ಧರಣೆ ಕಾರ್ಯವನ್ನು ನಿರ್ವಹಿಸುವಂತೆ ಸರ್ಕಾರ ಆದೇಶ ನೀಡಿದೆ.  ಹೀಗಾಗಿ ಸರ್ಕಾರಿ ಹಾಗೂ ಖಾಸಗಿ ವೈದ್ಯರು ಗಳನ್ನು ಮಹಾನಗರ ಪಾಲಿಕೆಯ ವಾರ್ಡ್‍ವಾ ರು ಪ್ರಕರಣಗಳ ಫಿಸಿಕಲ್ ಟ್ರಯೇಜ್ ಕಾರ್ಯ ನಿರ್ವಹಿಸಲು ನಿಯೋಜಿಸಿ ಆದೇಶ ಹೊರಡಿಸಲಾಗಿದೆ ಎಂದರು.

 ಪಾಲಿಕೆ ವ್ಯಾಪ್ತಿಯಲ್ಲಿ  ಪ್ರತಿ ಮೂರು ವಾರ್ಡ್‍ಗಳಿಗೆ ಒಂದು ಡಿಸೆಂಟ್ರಲೈಸ್ಡ್ ಟ್ರಯೇಜ್ ಸೆಂಟರ್ ನಂತೆ ಒಟ್ಟು 15 ಡಿಸೆಂಟ್ರಲೈಸ್ಡ್ ಟ್ರಯೇಜ್ ಸೆಂಟರ್ ತೆರೆಯಲಾಗುವುದು.   ನಿಯೋಜಿಸಿದ ವೈದ್ಯರು ಸರ್ಕಾರದ ಮಾರ್ಗಸೂಚಿಯಂತೆ ಕೋವಿಡ್ ಸೋಂಕಿತರ ಫಿಸಿಕಲ್ ಟ್ರಯೇಜ್ ಕಾರ್ಯ ನಿರ್ವಹಿಸಬೇಕು. ಪ್ರತಿ 10 ದಿನಗಳಿಗೆ ಖಾಸಗಿ ವೈದ್ಯರನ್ನು ಬದಲಿಸಲಾಗುವುದು ಎಂದರು.

 ತಂಡದಲ್ಲಿ ಕೋವಿಡ್ ಸೋಂಕಿತರ ಪತ್ತೆ, ಸ್ವಾಬ್ ಸಂಗ್ರಹ, ಹೋಂ ಐಸೋಲೇಷನ್ ಮಾನಿಟರಿಂಗ್ ತಂಡಗಳು ಜೊತೆಗಿದ್ದು ಕಾರ್ಯ ನಿರ್ವಹಿಸಲಿವೆ.  ವೈದ್ಯರು ಸೋಂಕಿತರ ಆರೋಗ್ಯ ಪರಿಶೀಲಿಸಿ, ಸೋಂಕು ತೀವ್ರತೆ ಹಾಗೂ ಆರೋಗ್ಯ ಸ್ಥಿತಿಗತಿ ಆಧಾರದಲ್ಲಿ ಚಿಕಿತ್ಸೆಯ ಸ್ವರೂಪ, ಹೋಂ ಐಸೋಲೇಷನ್, ಕೋವಿಡ್ ಕೇರ್ ಸೆಂಟರ್, ಆಸ್ಪತ್ರೆ ಚಿಕಿತ್ಸೆಯನ್ನು ನಿರ್ಧರಿಸಬೇಕು.  ಈ ರೀತಿ ನಗರ ವ್ಯಾಪ್ತಿಯಲ್ಲಿ ತಂಡಗಳು ಸತತ 10 ದಿನಗಳ ಕಾಲ ಉತ್ತಮ ಕಾರ್ಯ ನಿರ್ವಹಿಸಿ ದಲ್ಲಿ, ಸೋಂಕು ಹರಡುವಿಕೆಯನ್ನು ಪರಿಣಾ ಮಕಾರಿ ಯಾಗಿ ತಡೆಗಟ್ಟಬಹುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್, ಜಿಲ್ಲೆಯ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷ ಡಾ. ಸೋಮಶೇಖರ್, ದಾವಣಗೆರೆ  ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಡಿಹೆಚ್‍ಒ ಡಾ. ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನಟರಾಜ್ ಮತ್ತು ಇತರರು ಉಪಸ್ಥಿತರಿದ್ದರು.

error: Content is protected !!