ಒಂದೇ ಸೆಮಿಸ್ಟರ್ ಪದವಿ ಪರೀಕ್ಷೆ ನಡೆಸಲು ಆಗ್ರಹ

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ದಾವಣಗೆರೆ, ಜು.30- ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ಇಲ್ಲಿನ ಶ್ರೀ ಮುರುಘಾ ರಾಜೇಂದ್ರ ಜಯದೇವ ವೃತ್ತದಲ್ಲಿ ಇಂದು‌ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. 

ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ರಾಜ್ಯ ದಾದ್ಯಂತ ಹೋರಾಟ ನಡೆಸಿರುವು ದನ್ನು ಗಮನದಲ್ಲಿಟ್ಟುಕೊಂಡು ಮತ್ತು ಅದರ ಪ್ರತಿಫಲವಾಗಿ ರಾಜ್ಯ ಸರ್ಕಾರವು 1 ಮಹತ್ತರ ನಿರ್ಧಾರ ವನ್ನು ಹೊರಡಿಸಿತ್ತು. ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸು ವಂತೆ ಆದೇಶ ಹೊರಡಿಸಿ ವಿದ್ಯಾರ್ಥಿ ಗಳ ಬೇಡಿಕೆಗಳಿಗೆ ಸ್ಪಂದಿಸಿರುವುದು ಸ್ವಾಗತಾರ್ಹ. ಇದರಿಂದಾಗಿ ರಾಜ್ಯದ ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ. ಆದರೆ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸಮಸ್ಯೆ ಇನ್ನೂ ಪರಿ ಹಾರವಾಗಿಲ್ಲ. ಇಂತಹ ಅಸಾಮಾನ್ಯ ಪರಿಸ್ಥಿತಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಸೆಪ್ಟೆಂಬರ್ 3 ನೇ ವಾರದ ಒಳಗಾಗಿ ಎರಡು ಸೆಮಿಸ್ಟರ್ ಪರೀಕ್ಷೆಗಳನ್ನು ಎದುರಿಸುವ ಸಮಸ್ಯೆ ಯಿಂದಾಗಿ ಅತ್ಯಂತ ಆತಂಕಕ್ಕೀಡಾ ಗಿದ್ದಾರೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಅಂತಿಮ ವರ್ಷದ ವಿದ್ಯಾರ್ಥಿ ಗಳಿಗೂ ಕೂಡ ಸೂಕ್ತ ಪರಿಹಾರವನ್ನು ಕೈಗೊಳ್ಳಬೇಕು. ಸರ್ಕಾರದ ಆದೇಶ ದಂತೆ ಸೆಪ್ಟೆಂಬರ್‌ 3 ನೇ ವಾರದ ಒಳಗಾಗಿ ಅಂತಿಮ ವರ್ಷದ ಪರೀಕ್ಷೆ ಗಳನ್ನು ಮುಗಿಸಬೇಕು ಎಂದಾದರೆ 20-25 ದಿನಗಳ ಅಂತರದಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ . ಇದು ವಿದ್ಯಾರ್ಥಿಗಳಲ್ಲಿ ಅತೀವ ಆತಂಕ ಸೃಷ್ಟಿಸುತ್ತದೆ ಅಲ್ಲದೆ ಇದು ಅವೈಜ್ಞಾನಿಕ ಎಂದು ಆಕ್ಷೇಪಿಸಿದರು.

ಪರೀಕ್ಷಾ ಪ್ರಕ್ರಿಯೆಗೆ ರಾಜ್ಯ ಸರ್ಕಾರದ ನಿರ್ದೇಶನವನ್ನು ಅಳವ ಡಿಸಬೇಕು, ದಾವಣಗೆರೆ ವಿಶ್ವವಿದ್ಯಾ ಲಯವು ಈ ಕೂಡಲೇ ಸುತ್ತೋಲೆ ಯನ್ನು ಬಿಡುಗಡೆ ಮಾಡಬೇಕು. ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ಯನ್ನು ನಡೆಸಬೇಕು ಎಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಪೂಜಾ ನಂದಿಹಳ್ಳಿ, ಕಿರಣ್, ಪುಷ್ಪಾ, ಕಾವ್ಯ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

error: Content is protected !!