ಧರ್ಮಸ್ಥಳ ಯೋಜನೆಯಿಂದ ತಾಲ್ಲೂಕು ಆಡಳಿತಕ್ಕೆ ವಾಹನ

ಹರಿಹರ, ಮೇ 27- ತಾಲ್ಲೂಕಿನಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿದ್ದು, ಕೋವಿಡ್ ಸೋಂಕಿತ ರನ್ನು ತುರ್ತಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ಮತ್ತು ಆಸ್ಪತ್ರೆಗಳಿಗೆ ಸಾಗಿಸಲು ಪೂರಕವಾಗಿ ತಾಲ್ಲೂಕು ದಂಡಾಧಿಕಾರಿಗಳ ಮನವಿಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲ್ಲೂಕು ಆಡಳಿತದ ಸುಪರ್ದಿಗೆ ಒಂದು ವಾಹನವನ್ನು ತಹಶೀಲ್ದಾರ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಸಮ್ಮುಖದಲ್ಲಿ ಇಂದು ಹಸ್ತಾಂತರಿಸಲಾಯಿತು.

ವಾಹನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್‌  ಕೆ.ಬಿ. ರಾಮಚಂದ್ರಪ್ಪ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ರಾಜ್ಯಾದ್ಯಂತ ಕೋವಿಡ್ ಸೋಂಕಿತರ ನೆರವಿಗೆ ಹತ್ತು ಹಲವು ಸಹಾಯವನ್ನು ನೀಡುತ್ತಿದ್ದು, ತಮ್ಮ ಮನವಿಗೆ ಸ್ಪಂದಿಸಿ ಶೀಘ್ರವಾಗಿ ಒಂದು ವಾಹನವನ್ನು ತಾಲ್ಲೂಕು ಆಡಳಿತಕ್ಕೆ ಒದಗಿ ಸುವ ಮೂಲಕ   ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಚಂದ್ರಮೋಹನ್, ತಾಲ್ಲೂಕಿನ ಯೋಜನಾಧಿಕಾರಿ ಗಣಪತಿ ಮಾಳಂಜಿ ಅವರುಗಳು ಮಾತನಾಡಿದರು. 

ಕಾರ್ಯಕ್ರಮದಲ್ಲಿ ಹಣಕಾಸು ಪ್ರಬಂಧಕ ಮೋಹನ್, ಮೇಲ್ವಿಚಾರಕರಾದ ಸಂಗೀತ ಪೂಜಾರ್, ಸಿಬ್ಬಂದಿಗಳಾದ ಮಂಜುನಾಥ್, ಹನುಮಂತ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು  ಮತ್ತು ಸೇವೆ ಒದಗಿಸುವ ವಾಹನ ಚಾಲಕರು ಹಾಜರಿದ್ದರು. ಸಂಗೀತ ಪೂಜಾರ್ ಸ್ವಾಗತಿಸಿದರು.

error: Content is protected !!