ಮಲೇಬೆನ್ನೂರು, ಮಾ.19- ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಶಿವರಾತ್ರಿ ಜಾತ್ರೆಯ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಬೆಳ್ಳಿ ರಥೋತ್ಸವ ಸಂಭ್ರಮದಿಂದ ಜರುಗಿತು.
ನಂದಿಗುಡಿ ಬೃಹನ್ಮಠದ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಸರಳವಾಗಿ ನೆರವೇರಿದ ರಥೋತ್ಸವದಲ್ಲಿ ಗದ್ದುಗೆ ಟ್ರಸ್ಟ್ ಕಮಿಟಿ ಕಾರ್ಯದರ್ಶಿ ಸುರೇಶ್ ಸೇರಿದಂತೆ ಟ್ರಸ್ಟ್ ಸದಸ್ಯರು, ಗ್ರಾಮಸ್ಥರು, ಭಕ್ತಾದಿಗಳು ಭಾಗವಹಿಸಿದ್ದರು.
ರಾತ್ರಿ ನಡೆದ ಅಜ್ಜಯ್ಯನ ಪಾಲಿಕೋತ್ಸವಕ್ಕೆ ಅಪಾರ ಭಕ್ತರು ಸಾಕ್ಷಿಯಾದರು. ಪಟಾಕಿ ಸಿಡಿತ ಬಾನಂಗಳದಲ್ಲಿ ಬಣ್ಣ ಬಣ್ಣದ ಚಿತ್ತಾರ ಮೂಡಿಸಿ ಗಮನ ಸೆಳೆದವು. ಶನಿವಾರ ಬೆಳಿಗ್ಗೆ ಭಕ್ತರ ಅಜ್ಜಯ್ಯನ ಫಳಾರ ಹಂಚುವ ಮೂಲಕ ಜಾತ್ರೆಗೆ ತೆರೆ ಎಳೆಯಲಾಗುವುದು.