ದಾವಣಗೆರೆ ಜೂ. 8 – ಕೃಷಿ ಇಲಾಖೆಯು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ರೈತರನ್ನು ಜಾಗೃತಗೊಳಿಸಲು ಆರಂಭಿಸಿ ರುವ ‘ಕೃಷಿ ಜಾಗೃತಿ ಅಭಿಯಾನ’ ವಿಶೇಷ ಪ್ರಚಾರ ವಾಹನಗಳಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಕೃಷಿ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರುಗಳಾದ ಮಾಡಾಳ್ ವಿರುಪಾಕ್ಷಪ್ಪ, ಎಸ್.ವಿ. ರಾಮಚಂದ್ರ, ಎಸ್.ಎ. ರವೀಂದ್ರನಾಥ್, ಪ್ರೊ. ಲಿಂಗಣ್ಣ, ಮೇಯರ್ ಎಸ್.ಟಿ. ವೀರೇಶ್, ಕೃಷಿ ಇಲಾಖೆ ಅಪರ ಆಯುಕ್ತ ವೆಂಕಟರಾವ್ ಪಾಟೀಲ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್, ಎಸ್ಪಿ ಹನುಮಂತರಾಯ, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಮತ್ತಿತರರು ಉಪಸ್ಥಿತರಿದ್ದರು.