ಜಗಳೂರು, ಜೂ.21- ಕೋವಿಡ್ ಲಸಿಕೆ ಬಗ್ಗೆ ಯಾವುದೇ ಅನುಮಾನ ಬೇಡ. ಪ್ರತಿಯೊಬ್ಬರೂ ಲಸಿಕೆಯನ್ನು ಹಾಕಿಸಿಕೊಂಡು ಆರೋಗ್ಯವಾಗಿರಬೇಕು ಎಂದು ಶಾಸಕ ಎಸ್.ವಿ. ರಾಮಚಂದ್ರ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
18 ವರ್ಷ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸಿನ ಪ್ರತಿಯೊಬ್ಬರಿಗೂ ಕೇಂದ್ರ ಸರ್ಕಾ ರದ ವತಿಯಿಂದ ಉಚಿತ ಕೋವಿಡ್-19 ಲಸಿಕೆ ನೀಡಲಾಗುತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕರು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕಿನ ವೈದ್ಯಾಧಿಕಾರಿ ಡಾ. ನಾಗರಾಜ್, ಬಿಜೆಪಿ ಅಧ್ಯಕ್ಷರಾದ ಎಚ್.ಸಿ. ಮಹೇಶ್, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಆರ್. ತಿಪ್ಪೇಸ್ವಾಮಿ, ಮುಖಂಡರಾದ ಬಿಸ್ತುವಳ್ಳಿ ಬಾಬು, ಶಿವಣ್ಣ ಇನ್ನಿತರರಿದ್ದರು.