ಬಿಜೆಪಿ ಸರ್ಕಾರದಿಂದ ಸಾಮಾಜಿಕ ನ್ಯಾಯಕ್ಕೆ ಕೊಡಲಿ ಪೆಟ್ಟು – ಡಿ.ಬಸವರಾಜ್

ಬಿಜೆಪಿ ಸರ್ಕಾರದಿಂದ ಸಾಮಾಜಿಕ ನ್ಯಾಯಕ್ಕೆ ಕೊಡಲಿ ಪೆಟ್ಟು - ಡಿ.ಬಸವರಾಜ್ - Janathavaniದಾವಣಗೆರೆ, ಆ.5- ರಾಜ್ಯ ಬಿಜೆಪಿ ಸರ್ಕಾರದಲ್ಲಿ 5 ಜನ ಭೋವಿ ಶಾಸಕರಿದ್ದರೂ, ಒಬ್ಬರಿಗೂ ಸಚಿವ ಸ್ಥಾನ ನೀಡದೆ ಸಾಮಾಜಿಕ ನ್ಯಾಯಕ್ಕೆ ಕೊಡಲಿ ಪೆಟ್ಟು ನೀಡಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಡಿ.ಬಸವರಾಜ್ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮರೀಚಿಕೆಯಾಗಿದೆ. ಚುನಾವಣೆ ವೇಳೆ ಮಾತ್ರ ಬಿಜೆಪಿ ನಾಯಕರಲ್ಲಿ ದಲಿತ ಪ್ರೇಮ ಹೆಚ್ಚಾಗುತ್ತದೆ ಎಂದು ಹೇಳಿದರು.

ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆ ಸೇರಿದಂತೆ 13 ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೇ ಪ್ರಾದೇಶಿಕ ಅಸಮತೋಲನ ಮಾಡುವ ಜೊತೆಗೆ ಜಿಲ್ಲೆಗಳ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರುಗಳ ಮೇಲೆ ಐಟಿ ಹಾಗೂ ಇಡಿ ದಾಳಿಗಳು ರಾಜಕೀಯ ಪ್ರೇರಿತ ಎಂದ ಬಸವರಾಜ್, ಬಿಜೆಪಿಯಲ್ಲೇನು ಬರೀ ಬಿಪಿಎಲ್ ಕಾರ್ಡುದಾರರೇ ಇದ್ದಾರೆಯೇ? ಎಂದು ಪ್ರಶ್ನಿಸಿದರು.

ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ಹೊಸ ಬಾಟ್ಲಿ, ಹಳೆ ಮದ್ಯ ಎಂಬಂತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಕಾಂಗ್ರೆಸ್ ಹಾಗೂ ಸಿದ್ಧರಾಮಯ್ಯನವರಿಂದ ಬಿಜೆಪಿ ಪಾಠ ಕಲಿಯಬೇಕು ಎಂದು ಕುಟುಕಿದರು.

ಜಿಲ್ಲಾ ಕಾಂಗ್ರೆಸ್ ಮುಖಂಡರುಗಳಾದ ಹೆಚ್. ಚಂದ್ರಪ್ಪ, ಕೆ.ಎಂ. ಮಂಜುನಾಥ್, ಎಂ.ಕೆ. ಲಿಯಾಖತ್ ಅಲಿ, ಆರ್.ಬಿ.ಝಡ್ ಭಾಷಾ, ಮಹ್ಮದ್ ಜಿಕ್ರಿಯಾ, ಡಿ. ಶಿವಕುಮಾರ್, ಫಾರೂಕ್ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.

error: Content is protected !!