ಪ್ರತಿ ಶನಿವಾರ, ಭಾನುವಾರ ದುಗ್ಗಮ್ಮನ ದರ್ಶನ ಇಲ್ಲ

ಪ್ರತಿ ಶನಿವಾರ, ಭಾನುವಾರ ದುಗ್ಗಮ್ಮನ ದರ್ಶನ ಇಲ್ಲ - Janathavaniದಾವಣಗೆರೆ, ಆ.6- ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಭಕ್ತಾದಿಗಳಿಗೆ ದರ್ಶನ ಇರುವುದಿಲ್ಲ ಎಂದು ದೇವಸ್ಥಾನ ಟ್ರಸ್ಟ್ ತಿಳಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ ದೇವಸ್ಥಾನ ಟ್ರಸ್ಟ್ ಗೌರವಾಧ್ಯಕ್ಷರೂ ಆಗಿರುವ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ್ರತಿ ಶನಿವಾರ ಮತ್ತು ಭಾನುವಾರ ಹೊರತುಪಡಿಸಿ, ಉಳಿದ ದಿನಗಳಲ್ಲಿ ದೇವಿ ದರ್ಶನ ಇದ್ದು, ಭಕ್ತಾದಿಗಳು ಮಾಸ್ಕ್‌ನೊಂದಿಗೆ ವ್ಯಕ್ತಿಗತ ಅಂತರ ಕಾಪಾಡಿಕೊಂಡು ದರ್ಶನ ಪಡೆಯುವುದು ಎಂದು ಧರ್ಮದರ್ಶಿ ಗೌಡ್ರು ಚನ್ನಬಸಪ್ಪ ತಿಳಿಸಿದ್ದಾರೆ.

error: Content is protected !!