ಹರಪನಹಳ್ಳಿ, ನ.14- ಶಿಕ್ಷಕರು ಮಕ್ಕಳಿಗೆ ನೈತಿಕ ಶಿಕ್ಷಣದ ಜೊತೆಗೆ ಮಹನೀಯರ ಆದರ್ಶದ ಬದುಕನ್ನು ಕಲಿಸಿಕೊಡಿ ಎಂದು ಸಿವಿಲ್ ಹಿರಿಯ ನ್ಯಾಯಾಧೀಶರಾದ ಎಂ.ಭಾರತಿ ಹೇಳಿದರು.
ಪಟ್ಟಣದ ಹೊಸಪೇಟೆ ರಸ್ತೆಯಲ್ಲಿರುವ ಬಾಬು ಜಗಜೀವನ್ ರಾಮ್ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿ ಯಿಂದ ಆಯೋಜಿಸಲಾಗಿದ್ದ ಮಕ್ಕಳ ದಿನಾಚ ರಣೆ ಮತ್ತು ಹಕ್ಕುಗಳು ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಂಡಿತ್ ಜವಾಹರಲಾಲ್ ನೆಹರು ಮಕ್ಕಳ ಜೊತೆ ಪ್ರೀತಿಯಿಂದ ನಡೆದುಕೊಳ್ಳುತ್ತಿ ದ್ದರು. ಅವರ ಮಾರ್ಗದಲ್ಲಿ ಶಾಲೆಯ ಶಿಕ್ಷಕರು ನಡೆಯಬೇಕು. ಇಂದಿನ ಮಕ್ಕಳೇ ದೇಶದ ಭವಿಷತ್ತಿನ ಪ್ರಜೆಗಳು. ಶಿಕ್ಷಕರು ಮಕ್ಕಳಿಗೆ ಮಹನೀಯರ ಕಥೆ, ಕಾದಂಬರಿಗಳ ಮೂಲಕ ಮಕ್ಕಳ ಮನಸ್ಸನ್ನು ಪರಿವರ್ತನೆ ಮಾಡಬೇಕು. ಮಕ್ಕಳನ್ನು ಸರಿಯಾದ ಮಾರ್ಗದಲ್ಲಿ ಕೊಂಡೊ ಯ್ಯುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ. ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನೀಡಿದ, ಜ್ಯೋತಿ ಬಾಪುಲೆ ಅವಮಾನವನ್ನು ಅನುಭವಿಸಿ, ಸಮಾಜದ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನೀಡಿದರು. ಭವ್ಯ ಭಾರತದ ಉದ್ದೇಶಕ್ಕಾಗಿ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನೀಡಿದ್ದಾರೆ. ಅಂತಹ ಮಹನೀಯರ ಆದರ್ಶದ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ ಎಂದರು.
ಸರ್ಕಾರಿ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿಗಳಿಂದ, ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿಗಳಿಂದ, ಟಿ.ಎಂ.ಎ.ಇ. ಪ್ರೌಢಶಾಲಾ ವಿದ್ಯಾರ್ಥಿಗಳು ಕಿರು ನಾಟಕ ಪ್ರದರ್ಶನ ಮಾಡಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ. ಚಂದ್ರಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ.ವೀರಭದ್ರಯ್ಯ, ವಕೀಲರ ಸಂಘದ ಉಪಾಧ್ಯಕ್ಷ ಟಿ.ವೆಂಕಟೇಶ್, ಅಪರ ಸರ್ಕಾರಿ ವಕೀಲ ವಿ.ಜಿ.ಪ್ರಕಾಶ್‌ಗೌಡ, ಕಣವಿಹಳ್ಳಿ ಮಂಜುನಾಥ್ ಮಾತನಾಡಿದರು. ವಕೀಲರು ಗಳಾದ ಎಂ. ಮೃತ್ಯುಂಜಯ, ಬಿ. ಗೋಣಿ ಬಸಪ್ಪ, ಮುತ್ತಿಗಿ ರೇವಣಸಿದ್ದಪ್ಪ, ಜಿ.ಎಸ್. ತಿಪ್ಪೇಸ್ವಾಮಿ, ಶಿಕ್ಷಕರಾದ ಅಂಜಿನಪ್ಪ, ಜಯ ಮಾಲತೇಶ, ಶಶಿಕಲಾ, ಸಿ. ಹನುಮಂತ, ಟಿ.ತಿಪ್ಪೇಶ್, ರೇವಣಸಿದ್ದಪ್ಪ, ಕೊಟ್ರೇಶ್, ಬಸವರಾಜ, ಚನ್ನಮಲ್ಲಪ್ಪ ಸೇರಿದಂತೆ ಇತರರಿದ್ದರು.