ಸರಳ, ಸಂಭ್ರಮದ 75ನೇ ಸ್ವಾತಂತ್ರ್ಯೋತ್ಸವ

ಭವ್ಯ ಭಾರತಕ್ಕೊಂದು ಹೊಸ ಭಾಷ್ಯ ಬರೆಯೋಣ

ದಾವಣಗೆರೆ, ಆ. 15- ಕೋವಿಡ್ ಮೂರನೇ ಅಲೆ ಬಂದದ್ದೇ ಆದರೆ ನಾವೆಲ್ಲರೂ ಒಗ್ಗಟ್ಟಾಗಿ ಶ್ರದ್ಧೆ ಹಾಗೂ ಧೈರ್ಯದಿಂದ ಕರ್ತವ್ಯ ನಿರ್ವಹಿಸಿ, ಜಿಲ್ಲೆಯ ಜನರನ್ನು ಕಾಪಾಡುತ್ತೇವೆ ಎಂದು ಪಣ ತೊಡೋಣ. ಕುಗ್ಗದೆ ಮುನ್ನುಗ್ಗೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಕರೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರ ಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಜಿಲ್ಲೆಯ ಜನತೆಯನ್ನುದ್ದೇಶಿಸಿ ಮಾತನಾಡಿದರು.

ಕೋವಿಡ್ ವಿರುದ್ಧ ನಾವೆಲ್ಲರೂ ಸಾರಿರುವ ಯುದ್ಧ ಇನ್ನೂ ಮುಗಿದಿಲ್ಲ. ಮೊದಲ ಎರಡು ಅಲೆಗಳಲ್ಲಿ ಅಧಿಕಾರಿ ಗಳು, ಸಿಬ್ಬಂದಿಗಳ ತಂಡ ಸಮರ್ಥವಾಗಿ ಕಾರ್ಯನಿರ್ವಹಿಸಿದೆ ಎಂದು ಸ್ಮರಿಸಿದ ಸಚಿವರು ತಂಡಕ್ಕೆ ಅಭಿನಂದಿಸುವುದಾಗಿ ಹೇಳಿದರು.

ಸಚಿವರು, 23 ಪುಟಗಳ ಸು ದೀರ್ಘ ಭಾಷಣ ದಲ್ಲಿ ಸ್ವಾತಂತ್ರ್ಯ ಕ್ಕಾಗಿ ಹೋರಾಡಿದ ಕ್ಷಣಗಳನ್ನು ನೆನೆದು,  ಹುತಾತ್ಮ ರಾದವರ ಸ್ಮರಣೆ ಮಾಡುತ್ತಾ,  ಮುಂದಿನ ದಿನ ಗಳಲ್ಲಿ ಭವ್ಯಭಾರತ ಕ್ಕೊಂದು ಹೊಸ ಭಾಷ್ಯ ಬರೆಯೋಣ ಎಂಬ ಸಂದೇಶ ಸಾರಿ ದರು. ಸರ್ಕಾರವು ಸಂಗೊಳ್ಳಿ ರಾಯ ಣ್ಣ ನಗರದ ರಿಂಗ್ ರಸ್ತೆಯಲ್ಲಿ ನಿರ್ಮಿ ಸಿರುವ ಮೇಲ್ಸೇ ತುವೆಗೆ ಕ್ರಾಂತಿ ವೀರಣ್ಣ ಸಂಗೊಳ್ಳಿ ರಾಯಣ್ಣ ಹೆಸರು ಇಟ್ಟಿರುವುದು ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರ ಸಲ್ಲಿಸುವ ಗೌರವವಾಗಿದೆ. ಆಗಸ್ಟ್ 15 ಹಾಗೂ ಜನವರಿ 26 ರಂದು ಸಂಗೊಳ್ಳಿ ರಾಯಣ್ಣ ಸಂಸ್ಮರಣೆಯ ದಿನಗಳೆಂದು ಗೌರವ ಸಮರ್ಪಣೆಯ ಆದೇಶ ಹೊರಡಿಸಿದೆ ಎಂದರು.

ಜಿಲ್ಲೆ ಹಾಗೂ ನಗರದ ವಿವಿಧ ಇಲಾಖೆಗಳ ಪ್ರಗತಿಯನ್ನು ಮೆಲುಕು ಹಾಕಿದ ಸಚಿವ ಭೈರತಿ, ಜಿಲ್ಲೆಯ ಜಲ ಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಕುಡಿಯುವ ನೀರು ಪೂರೈಸಲು 166.74 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಕೈಗೊಂಡಿದ್ದು, 225 ಕಾಮಗಾರಿಗಳು ಪ್ರಗತಿಯಲ್ಲಿವೆ. 9ಕಾಮಗಾರಿಗಳು ಪೂರ್ಣಗೊಂಡಿವೆ.

2021-22ನೇ ಸಾಲಿನಲ್ಲಿ 142 ಕಾಮಗಾರಿಗಳನ್ನು 470.91 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ. ಜಿಲ್ಲೆಯ 5 ಹೊಸ ಬ ಹುಗ್ರಾಮ ಕುಡಿಯುವ ನೀರು ಯೋಜನೆಗಳಿಗೆ 348.10 ಕೋಟಿ ರೂ. ಅಂದಾಜು ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.

ಜಗಳೂರು ವಿಧಾನಸಭಾ ವ್ಯಾಪ್ತಿಯಲ್ಲಿ 660 ಕೋಟಿ ರೂ. ವೆಚ್ಚದಲ್ಲಿ 57 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆ, ಚನ್ನಗಿರಿ ತಾಲ್ಲೂಕು ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಯ ಮುಂದುವರೆದ ಭಾಗಕ್ಕೆ 167 ಕೋಟಿ ರೂ. ಕಾಮಗಾರಿ, ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲ್ಲೂಕುಗಳಲ್ಲಿ 518 ಕೋಟಿ ರೂ. ಭಾಗದ ವ್ಯಾಪ್ತಿಯ 130 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಬಗ್ಗೆ ಪ್ರಸ್ತಾಪಿಸಿದರು.

ಜಿಲ್ಲೆಯಲ್ಲಿ ಒಂದು ಹಾಗೂ ಎರಡು ಡೋಸ್ ಸೇರಿ ಒಟ್ಟಾರೆ 711238 ಜನರಿಗೆ ಲಸಿಕೆ ನೀಡಲಾಗಿದೆ. ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿಯ 66203 ಹಾಗೂ ಶಾಲೆಯ 49226 ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದರು.

ಜಿಲ್ಲೆಯ 3 ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಗಳನ್ನು ಆಯುಶ್ ಹೆಲ್ತ್ ಅಂಡ್ ವಲ್ಫೇರ್ ಸೆಂಟರ್‌ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಮೂರನೇ ಅಲೆ ಮಕ್ಕಳಿಗೆ ಬರಬಹುದೆಂಬ ತಜ್ಞರ ಅಭಿಪ್ರಾಯದ ಮೇರೆಗೆ 6  ರಿಂದ 16 ವರ್ಷಗಳವರೆಗಿನ 5580 ಮಕ್ಕಳಿಗೆ ರೋಗ ನಿರೋಧಕ ಔಷಧಿ ವಿತರಿಸಲಾಗಿದೆ ಎಂದರು.

ದಾವಣಗೆರೆ ನಗರದಲ್ಲಿ ದಿನಂಪ್ರತಿ ಸುಮಾರು 170 ಟನ್ ಘನ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ತ್ಯಾಜ್ಯದ ವೈಜ್ಞಾನಿಕ ವಸ್ತು ಸಂಸ್ಕರಣೆ ಮತ್ತು ವಿಲೇವಾರಿಗೆ ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಯೋಜನೆ ರೀತ್ಯಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ 22 ಕೋಟಿ ರೂ.ಗಳ ಯೋಜನೆ ಮಂಜೂರಾಗಿದ್ದು ಯೋಜನೆ ಅನುಷ್ಠಾನಕ್ಕೆ ಟೆಂಡರ್ ಕರೆಯಲಾಗಿದೆ ಎಂದರು.

ಸ್ಮಾರ್ಟ್‌ ಸಿಟಿ ಯೋಜನೆಯಡಿ 1014 ಕೋಟಿ ರೂ.ಯೋಜನಾ ಮೊತ್ತದಲ್ಲಿ 95 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 445 ಕೋಟಿ ರೂ. ಬಿಡುಗಡೆಯಾಗಿದೆ. 37 ಕಾಮಗಾರಿಗಳು ಪೂರ್ಣಗೊಂಡಿರುವುದಾಗಿ ವಿವರಿಸಿದರು.

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್‌.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಐಜಿಪಿ ಎಸ್‌. ರವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌, ಸಿಇಒ ಡಾ. ವಿಜಯ ಮಹಾಂತೇಶ್‌ ದಾನಮ್ಮನವರ್‌, ಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಆಯುಕ್ತ ವಿಶ್ವನಾಥ ಮುದಜ್ಜಿ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಆಯುಕ್ತ ಬಿ.ಟಿ. ಕುಮಾರ ಸ್ವಾಮಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಹೆಚ್. ಶಿವಯೋಗಿಸ್ವಾಮಿ ಸೇರಿದಂತೆ ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!