ವಾಲ್ಮೀಕಿ ಜಯಂತಿಯೊಳಗೆ 7.5 ಮೀಸಲಾತಿ ಹೆಚ್ಚಳ

ಹರಪನಹಳ್ಳಿ, ಆ.23-  ಮುಂಬರುವ ವಾಲ್ಮೀಕಿ ಜಯಂತಿಯೊಳಗೆ 7.5 ಮೀಸಲಾತಿ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರಿ ಸಂಘದ ಕಛೇರಿಗೆ ಭೇಟಿ ನೀಡಿ ಶುಭ ಕೋರಿದ ಬಳಿಕ ಶ್ರೀಗಳು ಸುದ್ದಿಗಾರರೊಂದಿಗೆ  ಮಾತನಾಡಿದರು.

ವಾಲ್ಮೀಕಿ ನಾಯಕ ಸಮುದಾಯಕ್ಕೆ 7.5 ಮೀಸಲಾತಿ ಸಂಬಂಧ ಇತ್ತೀಚೆಗೆ ಸಮಾಜದ ಶಾಸಕರು, ಸಂಸದರು ಹಾಗೂ ಮುಖಂಡ ರೊಂದಿಗೆ ನಿಯೋಗ ತೆರಳಿ ನೂತನ ಮುಖ್ಯಮಂತ್ರಿಗಳನ್ನು  ಭೇಟಿಯಾಗಿ ಮನವಿ ಸಲ್ಲಿಸಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಬೊಮ್ಮಾಯಿ ಅವರು ಶೀಘ್ರದಲ್ಲೇ ಮೀಸಲಾತಿ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಜಾತ್ರಾ ಮಹೋತ್ಸವದಲ್ಲಿ ಬಿಜೆಪಿ ಸರ್ಕಾರ ಭರವಸೆ ನೀಡಿದಂತೆ ವಾಲ್ಮೀಕಿ ಅಭಿವೃದ್ಧಿ ಕಲ್ಯಾಣ ಇಲಾಖೆ ಘೋಷಣೆ ಮಾಡಿದ್ದು ತಮಗೆ ನೆಮ್ಮದಿ ತಂದಿದೆ. ಈಗಾಗಲೇ ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ರಾಜ ಕೀಯ ಹಾಗೂ ಆರ್ಥಿಕ ನೀತಿಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಯೂ ಸಹ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷ ಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬುದು ಅಖಂಡ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗ ಡ ವರ್ಗದವರ ಒತ್ತಾಯವಾಗಿದೆ ಎಂದರು.

ಅರಸೀಕೆರೆ ಬೈಪಾಸ್ ರಸ್ತೆಯಲ್ಲಿರುವ ವಾಲ್ಮೀಕಿ ಭವನದ ಕಟ್ಟಡ ಕಾಮಗಾರಿ ಪರಿಪೂರ್ಣವಾಗದೇ ನೆನೆಗುದಿಗೆ ಬಿದ್ದಿರುವ ಬಗ್ಗೆ ಸ್ಥಳೀಯ ಶಾಸಕ ಜಿ. ಕರುಣಾಕರ ರೆಡ್ಡಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕಾಮಗಾರಿಯ ವಿಳಂಬದ ಬಗ್ಗೆ ವಿಚಾರಿಸಿದಾಗ ಶಾಸಕರು ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಅನುದಾನ ಬಿಡುಗಡೆ ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷ ಕೆ. ಉಚ್ಚಂಗೆಪ್ಪ, ಪುರಸಭೆ ಮುಖ್ಯಾಧಿಕಾರಿ ಎರೆಗುಡಿ ಶಿವಕುಮಾರ್, ಸಮಾಜ ಕಲ್ಯಾಣಾಧಿಕಾರಿ ಆನಂದ್ ವೈ. ಡೊಳ್ಳಿನ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್‌ ಸದಸ್ಯ ಬಸವರಾಜ ಸಂಗಪ್ಪನವರ್, ಇಸಿಒ ಮಂಜುನಾಥ್ ಗಿರಜ್ಜಿ, ಸಹಕಾರ ಸಂಘದ ಅಧ್ಯಕ್ಷ ಕೆ.ಎಂ. ಪ್ರಾಣೇಶ, ಉಪಾಧ್ಯಕ್ಷ ನೀಲಗುಂದದ ಟಿ. ಮನೋಜ,  ಕಾರ್ಯದರ್ಶಿ ಸೆಳ್ಳಮ್ಮಿ ದುರುಗಪ್ಪ, ನಿರ್ದೇಶಕ ರಾದ ರೇವಣಸಿದ್ದಪ್ಪ, ಸಿದ್ದೇಶ ಚಟ್ನಿಹಳ್ಳಿ, ಕೆಂಚಪ್ಪ ಕುಮಾರನಹಳ್ಳಿ,  ನಿವೃತ್ತ ಮುಖ್ಯ ಶಿಕ್ಷಕ ಆನಂದಪ್ಪ, ಗುತ್ತಿಗೆದಾರ ಬಾಣದ ಅಂಜಿನಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತಳವಾರ ಚಂದ್ರಪ್ಪ, ಏಕಲವ್ಯ ಸಂಘರ್ಷ ಸಮಿತಿ ಅಧ್ಯಕ್ಷ ರಾಯದುರ್ಗದ ಪ್ರಕಾಶ್, ಕಾರ್ಯದರ್ಶಿ ಶಿವರಾಜ, ಕೆಂಚಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!