ಸಂಪತ್ ಕುಮಾರ್ ದೇಸಾಯಿ ಬಿಡುಗಡೆಗೆ ಆಗ್ರಹ

ಬೆಳಗಾವಿಯಲ್ಲಿ ಮಸಿ ಬಳಿದ ಪ್ರಕರಣ

ದಾವಣಗೆರೆ, ಡಿ.14- ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ ದಂತೆ, ಬಂಧಿಸಿರುವ ಕರ್ನಾಟಕ ನವ ನಿರ್ಮಾಣ ಸೇನೆ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂಪತ್‍ಕು ಮಾರ ದೇಸಾಯಿ ಅವರನ್ನು ಬಿಡುಗಡೆ ಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕ, ನಗರದಲ್ಲಿ ಇಂದು ಪ್ರತಿಭಟನೆ ನಡೆಸಿತು.

ಜಯದೇವ ವೃತ್ತದಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಕೆ.ಎನ್. ವೆಂಕಟೇಶ್, ಉಪಾಧ್ಯಕ್ಷ ಶೇರ್ ಅಲಿ, ಪ್ರಧಾನ ಕಾರ್ಯದರ್ಶಿ ಅಷ್ಪಾಕ್ ಅಲಿ ನೇತೃತ್ವದಲ್ಲಿ ಜಮಾಯಿಸಿದ್ದ ಸಂಘಟನೆಯ ಪದಾಧಿಕಾರಿಗಳು, ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. 

ಬೆಳಗಾವಿಯ ಸುವರ್ಣಸೌಧದಲ್ಲಿ ಕರ್ನಾಟಕ ಸರ್ಕಾರದ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ವೇಳೆ ಸರ್ಕಾರಕ್ಕೆ ಸವಾಲೊಡ್ಡಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಮಹಾಮೇಳಾವ್ ಆಚರಿಸುತ್ತಿರುವುದನ್ನು ವಿರೋಧಿಸಿ ನಮ್ಮ ಸೇನೆ ಯುವ ಘಟಕದ ಜಿಲ್ಲಾಧ್ಯಕ್ಷ ಸಂಪತಕುಮಾರ ದೇಸಾಯಿ ಅಲ್ಲಿನ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದಿದ್ದನ್ನು ಸೇನೆ, ಸ್ವಾಭಿಮಾನಿ ಕನ್ನಡಿಗರೆಲ್ಲರೂ ಸ್ವಾಗತಿಸುತ್ತೇವೆ. ಇಂತಹ ಕೆಲಸ ಮಾಡಿದ ಸಂಪತ್‍ಗೆ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಬಂಧಿಸಿದ್ದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ಬಿ. ಮಂಜುನಾಥ, ಅಯಾದ್ ಖಾನ್, ಶ್ರೀಧರ ಪಾಟೀಲ್, ಅಶಕ್ ಅಲಿ ಸೇರಿದಂತೆ ಇತರರು ಭಾಗವಹಿಸಿದ್ದರು.

error: Content is protected !!