ಮೇಯರ್ ನೇತೃತ್ವದಲ್ಲಿ ವಿಜಯೋತ್ಸವ

ವಿಧಾನ ಪರಿಷತ್‍ ಚುನಾವಣೆಯಲ್ಲಿ ದಾವಣಗೆರೆ-ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ನವೀನ್ ಗೆಲುವಿಗೆ, ನಗರ ಪಾಲಿಕೆ ಮಹಾಪೌರರಾದ ಎಸ್.ಟಿ. ವೀರೇಶ್ ನೇತೃತ್ವದಲ್ಲಿ ಪಾಲಿಕೆಯ ಬಿಜೆಪಿ ಜನಪ್ರತಿನಿಧಿಗಳು ವಿಜಯೋತ್ಸವ ಆಚರಿಸಿದರು.

ದಾವಣಗೆರೆ-ಚಿತ್ರದುರ್ಗ ಕ್ಷೇತ್ರದ ವಿಪ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು

ದಾವಣಗೆರೆ, ಡಿ.14- ವಿಧಾನ ಪರಿಷತ್‍ ಚುನಾವಣೆಯಲ್ಲಿ ದಾವಣಗೆರೆ-ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ನವೀನ್ ಗೆಲುವಿಗೆ ನಗರ ಪಾಲಿಕೆ ಮೇಯರ್ ಎಸ್.ಟಿ. ವೀರೇಶ್ ನೇತೃತ್ವದಲ್ಲಿ ಪಾಲಿಕೆಯ ಬಿಜೆಪಿ ಜನಪ್ರತಿನಿಧಿಗಳು ನಗರ ಪಾಲಿಕೆ ಆವರಣದಲ್ಲಿ ಇಂದು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ನಂತರ ಪತ್ರಕರ್ತರೊಂದಿಗೆ ಮೇಯರ್ ವೀರೇಶ್ ಮಾತನಾಡಿ, ಚುನಾವಣೆಯಲ್ಲಿ ನವೀನ್ ಅವರನ್ನು ಗೆಲ್ಲಿಸುವುದರೊಂದಿಗೆ ಮತದಾರ ಬಿಜೆಪಿಗೆ ಮನ್ನಣೆ ನೀಡಿದ್ದಾರೆ ಎಂಬುದು ಸಾಬೀತಾಗಿದೆ. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಕ್ಕೆ ಮತ್ತೊಮ್ಮೆ ಜನರು ಬೆಂಬಲಿಸಿದ್ದಾರೆ ಎಂದು ತಿಳಿಸಿದಂತಾಗಿದೆ ಎಂದರು.

ಹಣದಿಂದ ಎಲ್ಲರನ್ನು ಖರೀದಿಸಬ ಹುದು ಎಂದು ಕ್ಷೇತ್ರದ ಪರಿಚಯವೇ ಇಲ್ಲದ ಬೆಂಗಳೂರಿನ ಶ್ರೀಮಂತ ವ್ಯಕ್ತಿಯನ್ನು ಕರೆತಂ ದು ನಿಲ್ಲಿಸಿ ಮತದಾರರನ್ನು ಕೀಳಾಗಿ ಕಂಡ ಕಾಂಗ್ರೆಸ್‍ಗೆ ಸ್ಥಳೀಯ ಸಂಸ್ಥೆಗಳ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಈ ಹಿಂದೆ ಬೇರೆ ಊರಿನವರಾಗಿದ್ದ ರಘು ಆಚಾರ್ ಕಾಂಗ್ರೆ ಸ್‍ನಿಂದ ಎರಡು ಬಾರಿ ಗೆದ್ದು, ಕ್ಷೇತ್ರವನ್ನು ನಿರ್ಲಕ್ಷಿಸಿದ್ದರು ಎಂದು ಹೇಳಿದರು.

ದಾವಣಗೆರೆ ಮೇಯರ್ ಚುನಾವಣೆ ಯಲ್ಲಿ ಬಿಜೆಪಿಗೆ ಮತ ನೀಡಿದ್ದ ವಿಧಾನ ಪರಿಷತ್ ಸದಸ್ಯರ ಅನುದಾನವನ್ನು ಪಾಲಿಕೆಗೆ ತರುವ ಪ್ರಯತ್ನಗಳು ನಡೆದಿವೆ. ಪದವೀಧ ರರ ಕ್ಷೇತ್ರದಿಂದ ಆಯ್ಕೆಗೊಂಡಿ ರುವ ಚಿದಾ ನಂದಗೌಡ ಅವರು ನಗರದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಆರಂಭಿಸಲಿದ್ದಾರೆ. ಈ ಹಿನ್ನೆ ಲೆಯಲ್ಲಿ ಸ್ಥಳ ಪರಿಶೀಲನೆ ನಡೆಯುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಮೇಯರ್  ಉತ್ತರಿಸಿದರು.

ಉಪ ಮೇಯರ್ ಶಿಲ್ಪ ಜಯಪ್ರಕಾಶ್, ನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರುಗ ಳಾದ ಉಮಾ ಪ್ರಕಾಶ್, ಎಲ್.ಡಿ. ಗೋಣೆಪ್ಪ, ಸದಸ್ಯರುಗಳಾದ ಪ್ರಸನ್ನ ಕುಮಾರ್, ಕೆ.ಎಂ. ವೀರೇಶ್ ಪೈಲ್ವಾನ್, ಸ್ವಾಗಿ ಶಾಂತ ಕುಮಾರ್, ಸೌಮ್ಯ ನರೇಂದ್ರ ಕುಮಾರ್, ಗೌರಮ್ಮ, ಯಶೋಧ ಹೆಗ್ಗಪ್ಪ, ಗಾಯತ್ರಿ ಬಾಯಿ ಸೇರಿದಂತೆ ಇತರರು ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.

error: Content is protected !!