ಸದೃಢ ಆರೋಗ್ಯಕ್ಕಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಿ

ದಾವಿವಿ ಅಂತರ್ ಕಾಲೇಜುಗಳ ಭಾರ ಎತ್ತುವ, ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕುಲಪತಿ ಪ್ರೊ.ಶರಣಪ್ಪ ಹಲಸೆ

ದಾವಣಗೆರೆ, ಡಿ.15- ದಾವಣಗೆರೆ ವಿಶ್ವ ವಿದ್ಯಾನಿಲಯ ಹಾಗೂ ಶ್ರೀ ಮಂಜುನಾಥ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ 2021-22ನೇ ಸಾಲಿನ ದಾವಣಗೆರೆ ವಿವಿ ಅಂತರ್ ಕಾಲೇಜುಗಳ ಪುರುಷ ಮತ್ತು ಮಹಿಳೆಯರ ಭಾರ ಎತ್ತುವ ಸ್ಪರ್ಧೆ, ದೇಹದಾರ್ಢ್ಯ ಸ್ಪರ್ಧೆಗಳನ್ನು ದಾವಿವಿ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತ ನಾಡಿದ ಕುಲಪತಿಗಳು, ಸದೃಢ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಪಾಲಿಕೆ ಸದಸ್ಯ ಕೆ.ಎಂ. ವೀರೇಶ್, ಶ್ರೀ ಮಂಜುನಾಥ ಸ್ವಾಮಿ ವಿದ್ಯಾಸಂಸ್ಥೆ ಅಧ್ಯಕ್ಷ ಡಿ.ಸಂದೀಪ್, ಜಿಲ್ಲಾ ವೇಟ್ ಲಿಫ್ಟ್ ಅಸೋಸಿಯೇಷನ್ ಅಧ್ಯಕ್ಷ ಹೆಚ್.ಮಹೇಶ್ ಆಗಮಿಸಿದ್ದರು. ಕಾಲೇಜು ಪ್ರಾಂಶುಪಾಲರಾದ ಡಾ. ಡಿ.ಕೆ. ಅಂಜಿನಪ್ಪ ಉಪಸ್ಥಿತರಿದ್ದರು. ನಿವೃತ್ತ ಪ್ರಾಧ್ಯಾಪಕ ಪ್ರೊ. ದ್ಯಾಮಪ್ಪ ಅಧ್ಯಕ್ಷತೆ ವಹಿಸಿದ್ದರು.ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಶಂಕರಪ್ಪ ಉಪಸ್ಥಿತರಿದ್ದರು.

ಡಿ.ಮಂಜುನಾಥ್‌ ಮಿಸ್ಟರ್ ದಾವಣಗೆರೆ:  ಸಂಜೆ ನಡೆದ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಡಿವೈಎಸ್ಪಿ ಪಿ.ಬಿ. ಪ್ರಕಾಶ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಡಿ.ಮಂಜುನಾಥ್ ಅವರಿಗೆ ಮಿಸ್ಟರ್ ದಾವಣಗೆರೆ ಎಂಬ ಬಿರುದು ನೀಡಿ ಗೌರವಿಸಲಾಯಿತು.

error: Content is protected !!