ಹರಿಹರದಲ್ಲಿ ನಾಳೆ ಯೆನೆಪೋಯ ಆಸ್ಪತ್ರೆ ಉದ್ಘಾಟನೆ

ಹರಿಹರ, ಡಿ.17- ನಗರದ ಶಿವಮೊಗ್ಗ ರಸ್ತೆಯ ಸಿದ್ದೇಶ್ವರ ಸಂಕೀರ್ಣದಲ್ಲಿ ನಾಡಿದ್ದು ದಿನಾಂಕ 19 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರು ಮೂಲದ ಯೆನೆಪೋಯ ಸಂಸ್ಥೆಯ ಯೆನೆಪೋಯ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ ಎಂದು ಯೆನೆಪೋಯ ಮೆಡಿಕಲ್ ಕಾಲೇಜು ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ವಿಜಯಾನಂದ ಶೆಟ್ಟಿ ತಿಳಿಸಿದ್ದಾರೆ.

ನಗರದ ರಚನಾ ಕ್ರೀಡಾ ಟ್ರಸ್ಟ್ ಸಭಾಂಗಣ ದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, 1999 ರಿಂದ ಮಂಗಳೂರಿನಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು, ಆಸ್ಪತ್ರೆಯನ್ನು ಸ್ಥಾಪಿಸಿ ಕರ್ನಾಟಕದ ನಾನಾ ಭಾಗದಿಂದ ಬರುವಂತಹ ರೋಗಿಗಳಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುತ್ತಾ ಬಂದಿದ್ದು, ಹರಿಹರ ಭಾಗದಲ್ಲಿ ಒಂದು ಆಸ್ಪತ್ರೆಯನ್ನು ತೆರೆಯಬೇಕು ಎಂಬ ಇಲ್ಲಿನ ಜನರ ಅಪೇಕ್ಷೆಯಂತೆ ಈಗ ಚಿಕ್ಕದಾಗಿ ಆಸ್ಪತ್ರೆಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.

ಶಾಸಕ ಎಸ್. ರಾಮಪ್ಪ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಮಾಜಿ ಶಾಸಕ ಬಿ.ಪಿ. ಹರೀಶ್, ನಗರಸಭೆ ಅಧ್ಯಕ್ಷೆ ರತ್ನ ಡಿ. ಉಜ್ಜೇಶ್,  ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್,  ತಾಲ್ಲೂಕು ಆರೋಗ್ಯ ಅಧಿಕಾರಿ ಡಾ ಚಂದ್ರಮೋಹನ್,  ಉದ್ಯಮಿ ಡಿ. ಹೇಮಂತ್ ರಾಜ್  ಸೇರಿದಂತೆ ಹಲವಾರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಮೊಹಮ್ಮದ್ ಆಶ್ರಫ್,  ಚೀಪ್  ಫಾರ್ಮಾಸಿಸ್ಟ್ ಮಹಮದ್ ಅಲಿ, ಬಿ. ಮುಗ್ದುಂ ಮತ್ತಿತರರು ಉಪಸ್ಥಿತರಿದ್ದರು.

error: Content is protected !!