ದಾವಣಗೆರೆ ಜಯದೇವ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಜಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಂತರ ಪುಂಡರ ಬಂಧನಕ್ಕೆ ಒತ್ತಾಯಿಸಿ ತಹಶೀಲ್ದಾರ್ಗೆ ಮನವಿ.
ನಗರದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಪ್ರತಿಭಟನೆ
ದಾವಣಗೆರೆ, ಡಿ.20- ಕನ್ನಡ ಬಾವುಟ ಸುಟ್ಟು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಭಗ್ನಗೊಳಿಸಿರುವ ಎಂಇಎಸ್ ಪುಂಡರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕೈಗೊಳ್ಳಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಎಂಇಎಸ್ ಮತ್ತು ಶಿವಸೇನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡಪರ ಸಂಘಟಣೆಗಳ ಒಕ್ಕೂಟದ ಕಾರ್ಯಾಧ್ಯಕ್ಷ ಕೆ.ಜಿ.ಶಿವಕುಮಾರ್, ಪದೇ ಪದೇ ಕರ್ನಾಟಕ ಮತ್ತು ಮಹಾರಾಷ್ಟ್ರದ ಮಧ್ಯೆ ಬೆಂಕಿ ಹೊತ್ತಿಸುವ ಕೆಲಸ ಮಾಡುತ್ತಿರುವ ಎಂಇಎಸ್ ಕಾರ್ಯಕರ್ತರ ನಡೆ ಖಂಡನೀಯ ಎಂದರು.
ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಪ್ರತಿ ಬಾರಿಯು ಎಂಇಎಸ್ ಪುಂಡರು ಪುಂಡಾಟಿಕೆ ಮೆರೆಯುತ್ತಿದ್ದು, ಈ ಬಾರಿ ಕನ್ನಡ ಬಾವುಟ ಸುಟ್ಟಿರುವುದಲ್ಲದೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಯನ್ನು ವಿರೂಪಗೊಳಿಸಿದ್ದಾರೆ. ಎಂಇಎಸ್ನ ಈ ಕೆಟ್ಟ ನಡೆಯ ಹಿಂದೆ ಬೆಳಗಾವಿಯನ್ನು ಛಿದ್ರಗೊಳಿಸುವ ಹುನ್ನಾರ ಅಡಗಿದೆ ಎಂದು ಆಶರೋಪಿಸಿದರು.
ಒಕ್ಕೂಟದ ಜಮ್ಮನಹಳ್ಳಿ ನಾಗರಾಜ್ ಮಾತನಾಡಿ, ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ಕರ್ನಾಟಕದಲ್ಲಿ ನಿಷೇಧಿಸಬೇಕು. ಕನ್ನಡ ಬಾವುಟ ಸುಟ್ಟ ಮತ್ತು ರಾಯಣ್ಣರ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಗೆ ಬೆಂಬಲ ಸೂಚಿಸಿ ಭಾಗವಹಿಸಿ ಮಾತನಾಡಿದ ರೈತ ಮುಖಂಡ ಬಲ್ಲೂರು ರವಿಕುಮಾರ್, ಕನ್ನಡ ಬಾವುಟ ಸುಟ್ಟಿರುವುದು ಮತ್ತು ರಾಯಣ್ಣರ ಪುತ್ಥಳಿ ಭಗ್ನಗೊಳಿಸಿರುವುದರಿಂದ ಇಡೀ ರಾಜ್ಯದ ಮಾನ ಹಾನಿಯಾದಂತಾಗಿದೆ ಎಂದರು.
ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಗಳ ಮುಖಂಡರು, ಬಳಿಕ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ತೆರಳಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಮೂರ್ತಿಗೆ ಕ್ಷೀರಾಭಿಷೇಕ ನಡೆಸಿ, ಮಾಲಾರ್ಪಣೆ ಮಾಡಿ ರಾಯಣ್ಣರ ಪರವಾಗಿ