ಹರಿಹರದ ಶಾಸಕ ಎಸ್. ರಾಮಪ್ಪ ವಿಶ್ವಾಸ
ಮಲೇಬೆನ್ನೂರು, ಡಿ.24- ಮಲೇಬೆನ್ನೂರು ಪುರಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಎಸ್. ರಾಮಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ 1, 2, 3, 4, 5, 14, 20, 21 ಮತ್ತು 22 ನೇ ವಾರ್ಡಿನಲ್ಲಿ ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಿ ಅವರು ಮಾತನಾಡಿದರು.
ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ನಮ್ಮ ಮನವಿ ಮೇರೆಗೆ ಮಲೇಬೆನ್ನೂರು ಗ್ರಾ.ಪಂ. ಅನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ್ದರು.
ಪುರಸಭೆಯ ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಜೆಡಿಎಸ್ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿತು.
ನಗರೋತ್ಥಾನ ಯೋಜನೆಯಡಿ ಮಲೇಬೆನ್ನೂರಿಗೆ ಶೀಘ್ರ 15 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದೆ. ಮುಂದಿನ ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಸ್ಪಷ್ಟವಾಗಿದ್ದು, ಮಲೇಬೆನ್ನೂರು ಪುರಸಭೆಯಲ್ಲೂ ಕಾಂಗ್ರೆಸ್‌ಗೆ ಅಧಿಕಾರ ನೀಡಲು ಜನ ತೀರ್ಮಾನಿಸಿದ್ದಾರೆ ಎಂದು ರಾಮಪ್ಪ ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಅಬ್ದುಲ್ ಜಬ್ಬಾರ್, ಶ್ರೀಮತಿ ಜಲಜಾನಾಯ್ಕ ಮಾತನಾಡಿದರು.
ಜಿ.ಪಂ. ಮಾಜಿ ಸದಸ್ಯರಾದ ಬೆಣ್ಣೆಹಳ್ಳಿ ಹಾಲೇಶಪ್ಪ, ಎಂ. ನಾಗೇಂದ್ರಪ್ಪ, ಎಪಿಎಂಸಿ ಅಧ್ಯಕ್ಷ ಜಿ. ಮಂಜುನಾಥ್ ಪಟೇಲ್, ಮುಖಂಡರಾದ ಸೈಯದ್ ರೋಷನ್, ಡಾ. ಬಿ. ಚಂದ್ರಶೇಖರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ, ನಗರಸಭೆ ಮಾಜಿ ಅಧ್ಯಕ್ಷ ರೇವಣಸಿದ್ದಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಜಿಗಳಿ ಆನಂದಪ್ಪ, ಸೈಯದ್ ಜಾಕೀರ್, ಹೆಚ್.ಜಿ. ಚಂದ್ರಶೇಖರ್, ನಂದಿಗಾವಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ಅಬೀದ್ ಅಲಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಖಾಲಿದ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ರಂಜಿತ್, ಹರಿಹರ ಯುವ ಕಾಂಗ್ರೆಸ್ ಉಪಾಧ್ಯಕ್ಷ ತಾಹೀರ್, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಕುಂಬಳೂರು ವಾಸು, ಪುರಸಭೆ ಮಾಜಿ ಸದಸ್ಯರಾದ ಎ. ಆರೀಫ್ ಅಲಿ, ಎಂ.ಬಿ. ಫೈಜು, ಫಕೃದ್ಧೀನ್, ಪಿಎಸಿಎಸ್ ಅಧ್ಯಕ್ಷ ಪಿ.ಆರ್. ಕುಮಾರ್, ಯುನೂಸ್, ಪಿ.ಹೆಚ್. ಶಿವಕುಮಾರ್ ಎಳೆಹೊಳೆ ಕುಮಾರ್, ವಿದ್ಯಾ, ನೇತ್ರಾವತಿ, ಸವಿತಾ ನಾಯ್ಕ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಿದ್ದರು.