ದಾವಣಗೆರೆ, ಡಿ. 29 – ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಕವಿ ಕುವೆಂಪು ರವರ ಜನ್ಮ ದಿನಾಚರಣೆಯನ್ನು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಹಿರಿಯ ಪತ್ರಕರ್ತ ಬಿ.ಎನ್. ಮಲ್ಲೇಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಒಕ್ಕಲಿಗ ಸಮಾಜದ ಮುಖಂಡರಾದ ಅಶೋಕ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೌಸರ್ ರೇಷ್ಮ, ನಗರಾಭಿವೃದ್ದಿ ಕೋಶದ ಯೋಜನಾಧಿಕಾರಿ ನಜ್ಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಉಪಸ್ಥಿತರಿದ್ದರು.
December 25, 2024