ದಾವಣಗೆರೆ, ಅ.5 – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ ಸುರೇಶ್ ಅವರುಗಳ ಮನೆ ಮೇಲಿನ ಸಿಬಿಐ ದಾಳಿಯನ್ನು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯದಲ್ಲಿ ವಿಧಾನಸಭೆಯ ಎರಡು ಉಪ ಚುನಾವಣೆ ಹಾಗೂ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿ ರುವ ಸಂದರ್ಭದಲ್ಲಿ ಸೋಲಿನ ಭೀತಿಯಿಂದ ಬಿಜೆಪಿ ರಾಜಕೀಯ ಪಿತೂರಿ ರೂಪಿಸಿದೆ ಎಂದು ಅವರು ಕಿಡಿಕಾರಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಮೇಲಿನ ಸಿಬಿಐ ದಾಳಿ ಸಂಚು ರೂಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‍ಶಾ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರುಗಳು ದ್ವೇಷದ ರಾಜ ಕಾರಣ ಮಾಡುತ್ತಿದ್ದಾರೆಂದು ಅವರು ಕಿಡಿ ಕಾರಿದ್ದಾರೆ.