ದಾವಣಗೆರೆ, ಅ. 18 – ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ 12 ವೆಂಟಿಲೇಟರ್ ಬೆಡ್‌ಗಳ ಎಂಐಸಿಯುಗೆ ಚಾಲನೆ ನೀಡಲಾಗಿದೆ. ಇದರಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ವೆಂಟಿಲೇಟರ್‌ಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಎಂಐಸಿಯು ಘಟಕಕ್ಕೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಹಿಂದೆ ಆಸ್ಪತ್ರೆಯಲ್ಲಿ 10 ವೆಂಟಿಲೇಟರ್‌ಗಳಿದ್ದವು, ಈಗ 12 ಹೆಚ್ಚುವರಿಯಾಗಿ ಸೇರ್ಪಡೆಯಾಗಿವೆ ಎಂದು ತಿಳಿಸಿದ್ದಾರೆ. ಇನ್ನೂ 12 ವೆಂಟಿಲೇಟರ್ ಬೆಡ್‌ಗಳನ್ನು ಸೇವೆಗೆ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಬೀಳಗಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್, ಅರವಳಿಕೆ ತಜ್ಞ ಡಾ. ಸಂಜಯ್, ಶೂಶ್ರೂಷಕಾಧಿಕಾರಿ ಆಶಾ ಕಾಂಬ್ಳೆ, ಡಾ. ಮಂಜುನಾಥ್ ಪಾಟೀಲ್, ಜೆಜೆಎಂನ ತಜ್ಞವೈದ್ಯ ಡಾ. ರವಿ ಅವರೂ ಇದ್ದರು.