ಕಟೀಲ್ ಹೇಳಿಕೆಗೆ ಸೇವಾಲಾಲ್ ಶ್ರೀಗಳ ಖಂಡನೆ

ದಾವಣಗೆರೆ, ಅ.30- ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಶ್ರೀಗಳು, ಹೇಳಿಕೆ ಹಿಂಪಡೆಯಬೇಕು ಮತ್ತು ಕ್ಷಮೆ ಯಾಚಿಸುವಂತೆ ಕಟೀಲ್ ಅವರನ್ನು ಆಗ್ರಹಿಸಿದ್ದಾರೆ.

ಶಿರಾ ವಿಧಾನಸಭಾ ಉಪ ಚುನಾವಣೆಯ ಪ್ರಚಾರ ದಲ್ಲಿ ಕಟೀಲ್ ಅವರು ನಮ್ಮ ಸರ್ಕಾರ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಬದ್ಧ ಎಂಬ ಹೇಳಿಕೆ ನೀಡಿರುವುದು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಹಿಂದುಳಿದ ಸಮುದಾಯಗಳ ನಡುವೆ ವಿಷ ಬೀಜವನ್ನು ಬಿತ್ತುವ ಕೆಲಸಕ್ಕೆ ಮುಂದಾಗಿದ್ದಾರೆ.  ಎಸ್ಸಿ ಸಮುದಾಯಗಳ ನಡುವೆ ಬಿರುಕು ಮೂಡಿಸುವ ಕೆಲಸವಾ ಗಿದೆ ಎಂದು ಶ್ರೀಗಳು ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ವಿರೋಧ ವ್ಯಕ್ತಪಡಿಸಿದರಲ್ಲದೇ, ನಮ್ಮ ಸಮುದಾಯ ದವರು ಎಂದಿಗೂ ಒಗ್ಗಟ್ಟಾಗಿದ್ದೇವೆ ಎಂದು ಎಚ್ಚರಿಸಿದ್ದಾರೆ.

ಈ ಹಿಂದೆ ಮಾಜಿ ಸಚಿವ ಹೆಚ್. ಆಂಜನೇಯ ಅವರು ಇದೇ ವಿಚಾರವಾಗಿ ಹೇಳಿಕೆ ನೀಡುತ್ತಾ ಕಾಂಗ್ರೆ ಸ್‌ಗೆ ಕುತ್ತು ತಂದಿದ್ದರು. ಇದೀಗ ಕಟೀಲ್ ಅವರು ಸಿಎಂ ಯಡಿಯೂರಪ್ಪ ಅವರ ಸ್ಥಾನಕ್ಕೆ ಕುತ್ತು ತಂದು ತಾವು ಕನಸು ಕಾಣುತ್ತಿದ್ದಾರೆ ಎಂದು ಶ್ರೀಗಳು ಆರೋಪಿಸಿದರು. ಕಟೀಲ್ ಅವರ ಈ ಹೇಳಿಕೆ ವಿರುದ್ಧ ಬಂಜಾರ ಸಮುದಾಯ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸ ಲಿದೆ. ಈ ಸಂಬಂಧ ನಾಡಿದ್ದು ದಿನಾಂಕ 31ರಂದು ಚಿತ್ರ ದುರ್ಗದ ಬಂಜಾರ ಗುರುಪೀಠದಲ್ಲಿ ಸಭೆ ಆಯೋಜನೆ ಮಾಡಲಾಗಿದೆ ಎಂದು ಶ್ರೀಗಳು ತಿಳಿಸಿದರು. 

ಕರ್ನಾಟಕ ಬಂಜಾರ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆ.ಡಿ. ನಾಯ್ಕ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಗೌರವಾಧ್ಯಕ್ಷ ಆರ್. ವೆಂಕಟೇಶ್ ನಾಯ್ಕ, ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ನಾಯ್ಕ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಆರುಣ್ ಸೇರಿದಂತೆ ಇತರರು ಇದ್ದರು.

error: Content is protected !!