ಡಾ. ಎಂ.ಜಿ. ಈಶ್ವರಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು, ನ. 8 – ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ನಾಡು – ನುಡಿಗೆ ಸಲ್ಲಿಸಿದ ಸೇವೆಗಾಗಿ ವಿವಿಧ ಕ್ಷೇತ್ರ ಗಳ ಸಾಧಕರಿಗೆ ಕರ್ನಾಟಕ ಸರ್ಕಾರವು ಪ್ರತಿ ವರ್ಷ ಕೊಡ ಮಾಡುವ 2020ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ದಾವಣಗೆರೆಯ ಜಾನಪದ ವಿದ್ವಾಂಸ ಡಾ. ಎಂ.ಜಿ. ಈಶ್ವರಪ್ಪ ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು. 

ಈ ಪ್ರಶಸ್ತಿಯು ಒಂದು ಲಕ್ಷ ರೂ. ನಗದು, 25 ಗ್ರಾಂ ಚಿನ್ನ, ಸ್ಮರಣಿಕೆಯನ್ನೊಳಗೊಂಡಿದ್ದು, ಡಾ. ಎಂ.ಜಿ. ಈಶ್ವರಪ್ಪ ಅವರೂ ಸೇರಿದಂತೆ, ಪ್ರಶಸ್ತಿಗೆ ಆಯ್ಕೆಯಾಗಿದ್ದ ಎಲ್ಲಾ 65 ಸಾಧಕರನ್ನು ಮುಖ್ಯಮಂತ್ರಿಗಳು ಪೇಟ ತೊಡಿಸಿ, ಸನ್ಮಾನಿಸಿ ಗೌರವಿಸುವುದರ ಮೂಲಕ ಪ್ರಶಸ್ತಿ ಪ್ರದಾನ ಮಾಡಿದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಸಿ.ಟಿ. ರವಿ, ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

error: Content is protected !!