ಪರಮಶಿವಯ್ಯ, ಲಿಂಗಾಯತ ನಿಗಮದ ಅಧ್ಯಕ್ಷ

ಪರಮಶಿವಯ್ಯ, ಲಿಂಗಾಯತ ನಿಗಮದ ಅಧ್ಯಕ್ಷ - Janathavaniಬೆಂಗಳೂರು, ನ. 24 – ನೂತನವಾಗಿ ರಚನೆಯಾಗಿರುವ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಬಿ.ಎಸ್. ಪರಮಶಿವಯ್ಯ ಅವರನ್ನು ನೇಮಿಸ ಲಾಗಿದೆ. ಅವರು ಪ್ರಸಕ್ತ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ನಿನ್ನೆಯಷ್ಟೇ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು.

ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಇದೇ ವೇಳೆ ನೇಮಕ ಮಾಡಲಾಗಿದೆ. ಅಲ್ಲದೇ, ಹಲವಾರು ನಿಗಮಗಳ ಅಧ್ಯಕ್ಷ ಸ್ಥಾನಗಳಿಗೂ ನೇಮ ಕಾತಿ ಆದೇಶ ಹೊರಡಿಸಲಾಗಿದೆ.

ಬಿಜೆಪಿಯ ರಾಮನಗರ ಜಿಲ್ಲಾಧ್ಯಕ್ಷ ಎಂ. ರುದ್ರೇಶ್ ಅವರನ್ನು ಕೆ.ಆರ್.ಐ.ಡಿ.ಎಲ್. ಅಧ್ಯಕ್ಷರಾಗಿ ನೇಮಿಸಲಾಗಿದೆ. ಪಕ್ಷದ ಯುವ ಮೋರ್ಚಾ ನಾಯಕ ತಮ್ಮೇಶ್ ಗೌಡ ಅವರನ್ನು ಕರ್ನಾಟಕ ವಿದ್ಯುತ್ ಕಾರ್ಖಾನೆಯ ನಿರ್ದೇಶಕ ಮಂಡಳಿಯ ಮುಖ್ಯಸ್ಥರ ನ್ನಾಗಿ ನೇಮಿಸಲಾಗಿದೆ.

ಶಾಸಕಿ ತಾರಾ ಅನುರಾಧ ಅವರನ್ನು ರಾಜ್ಯ ಅರಣ್ಯ ಅಭಿವೃದ್ಧಿ ನಿಗಮಕ್ಕೆ, ಐಹೊಳೆ ಶಾಸಕ ದುರ್ಯೋಧನ ಮಹಲಿಂಗಪ್ಪ ಅವರನ್ನು ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ, ಕೆ.ಎಸ್ ಕಿರಣ್ ಕುಮಾರ್ ಅವರನ್ನು ಜೈವಿಕ ಇಂಧನ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಬಾಬು ಪತ್ತಾರ್ ಅವರು ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ, ಜಿ.ಕೆ. ಗಿರೀಶ್ ಉಪ್ಪಾರ್ ಅವರನ್ನು ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಾಗೂ ಎಸ್. ನರೇಶ್ ಕುಮಾರ್ ಅವರನ್ನು ಸವಿತಾ ಸಮಾಜದ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

error: Content is protected !!