ನಾವೆಲ್ಲ ಒಂದಲ್ಲಾ ಒಂದು ರೀತಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಎಂಬ ಮಹಾನ್ ಚೇತನಕ್ಕೆ ಋಣಿಯಾಗಿದ್ದೇವೆ. ಅಲ್ಲದೇ, ಎಂದಿಗೂ ಋಣಿಯಾಗಿರುತ್ತೇವೆ.
– ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ
ದಾವಣಗೆರೆ, ಡಿ.5- ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 64ನೇ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮವನ್ನು ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಆಚರಿಸಲಾಯಿತು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳು, ವಿವಿಧ ಸಮಾಜಗಳ ಮುಖಂಡರು ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ಜಿಲ್ಲಾಧಿಕಾರಿಗಳು ಮಾತನಾಡಿ, ನಾವೆಲ್ಲ ಒಂದಲ್ಲಾ ಒಂದು ರೀತಿಯಲ್ಲಿ ಅಂಬೇಡ್ಕರ್ ಎಂಬ ಮಹಾನ್ ಚೇತನಕ್ಕೆ ಋಣಿಯಾಗಿದ್ದೇವೆ. ಅಲ್ಲದೇ, ಎಂದಿಗೂ ಋಣಿಯಾಗಿರುತ್ತೇವೆ. ನಾವೆಲ್ಲ ಆ ಚೇತನ ನಡೆದು ಬಂದ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡಬೇಕು ಎಂದು ಆಶಿಸಿದರು.
ಗಣ್ಯರಾದ ಹೆಗ್ಗೆರೆ ರಂಗಪ್ಪ ಅಂಬೇಡ್ಕರ್ ಕುರಿತು ಗಾಯನ ಪ್ರಸ್ತುತ ಪಡಿಸಿದರು. ಈ ವೇಳೆ ಜಿ.ಪಂ ಉಪಾಧ್ಯಕ್ಷರಾದ ಶ್ರೀಮತಿ ಸಾಕಮ್ಮ ಗಂಗಾಧರನಾಯ್ಕ, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್ವರ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪದ್ಮಾ ಬಸವಂತಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ರೇಷ್ಮಾ ಕೌಸರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಶ್ರೀಮತಿ ನಜ್ಮಾ, ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ್ ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.