ದಾವಣಗೆರೆ, ಡಿ.16- ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಇರುವ ನಿವೇಶನಗಳಲ್ಲಿ ಘನ ತ್ಯಾಜ್ಯ ವಸ್ತುಗಳನ್ನು ಹಾಕುವುದು ಕಂಡು ಬಂದಿರುತ್ತದೆ ಹಾಗೂ ಈ ಬಗ್ಗೆ ಸ್ಥಳೀಯ ಸಾರ್ವಜನಿಕರಿಂದ ಹಲವಾರು ದೂರುಗಳು ಪಾಲಿಕೆಗೆ ಬಂದಿರುತ್ತವೆ.
ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಹೊಂದಿರುವ ಮಾಲೀಕರು ತಮ್ಮ ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಚಮಾಡಿಕೊಳ್ಳ ಬೇಕಿದೆ. ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಚ ಮಾಡುವಲ್ಲಿ ವಿಫಲರಾದಲ್ಲಿ ಪ್ರತಿ ಚದರ ಅಡಿಗೆ ರೂ.10 ರಂತೆ ದಂಡ ವಿಧಿಸಿ, ಕಂದಾಯ ವಹಿಯಲ್ಲಿ ನೋಂದಾಯಿಸಿಕೊಂಡು ವಸೂಲಿ ಮಾಡಲಾಗುವುದು ಎಂದು ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ತಿಳಿಸಿದ್ದಾರೆ.