ದಾವಣಗೆರೆ, ಆ.21- ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ ಅರಸು ಅವರ 105ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಿನ್ನೆ ಸರಳವಾಗಿ ಆಚರಿಸಲಾಯಿತು. ಜಿ.ಪಂ. ಅಧ್ಯಕ್ಷರಾದ ಶ್ರೀಮತಿ ದೀಪಾ ಜಗದೀಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಎಸ್ಪಿ ರಾಜೀವ್, ಜಿ.ಪಂ. ಉಪ ಕಾರ್ಯದರ್ಶಿ ಆನಂದ್, ಜಿಲ್ಲಾ ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಎಂ.ಉಮಾಪತಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಶ್ರೀಮತಿ ನಜ್ಮಾ ಇತರರು ಉಪಸ್ಥಿತರಿದ್ದರು.
December 24, 2024