ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರ ಕುಟುಂಬಕ್ಕೆ ‌50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ

ದಾವಣಗೆರೆ, ಆ.27- ಕೊರೊನಾ ವಾರಿಯರ್ಸ್‍ಗ ಳಾಗಿ ಕಾರ್ಯನಿರ್ವಹಿಸುತ್ತಾ  ಮೃತಪಟ್ಟಿರುವ ಅಂಗನ ವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕುಟುಂಬಗಳಿಗೆ ಸರ್ಕಾರ 50 ಲಕ್ಷ ಪರಿಹಾರ ಮತ್ತು ಅವರ ಅವಲಂಬಿತರಿಗೆ ಸರ್ಕಾರಿ ಕೆಲಸ ನೀಡಬೇಕೆಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ)  ಸರ್ಕಾರಕ್ಕೆ ಮನವಿ ಮಾಡಿದೆ.

ಕಳೆದ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೂ ಕೊರೊನಾ ವಾರಿಯರ್‍ಗಳಾಗಿ ಅಂಗನವಾಡಿ  ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿನ ವಾರಿಯರ್ ಕೆಲಸ ನಿರ್ವಹಿಸುವವರಿಗೆ ಸೇಫ್ಟಿ ಕಿಟ್, ಮುಖಗವಚ, ಸ್ಯಾನಿಟೈಸರ್, ಟೆಂಪರೇಚರ್ ಪರೀಕ್ಷೆ ಮಿಷನ್ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಸಾಮಗ್ರಿಗಳನ್ನು ನೀಡಿಲ್ಲ. ಕೊರೊನಾ ಸೋಂಕು ತಗಲುವ ಭೀತಿಯಲ್ಲಿ ನಿತ್ಯ ಕೆಲಸ ಮಾಡುತ್ತಿದ್ದಾರೆ. ಇಲ್ಲಿಯವರೆಗೂ 25ಕ್ಕಿಂತ ಹೆಚ್ಚು ಜನ ಸಾವನ್ನಪ್ಪಿದ್ದಾರೆಂದು ಮಹಿಳಾ ಮತ್ತು ಮಕ್ಕಳ ಇಲಾಖೆ ರಾಜ್ಯ ನಿರ್ದೇಶನ ಕಚೇರಿ ಮಾಹಿತಿ ನೀಡಿದೆ.

ದಾವಣಗೆರೆ ಜಿಲ್ಲೆಯಲ್ಲಿಯೂ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ಸಂಘಟನೆಯ ಅಧ್ಯಕ್ಷ
ಹೆಚ್.ಕೆ. ರಾಮಚಂದ್ರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೊರೊನಾ ನಿಯಂತ್ರಣದ ವಾರಿಯರ್ ಆಗಿ ಕೆಲಸ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮೃತರಾದರೆ ಅಂತಹವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಕುಟುಂಬದ ಅವಲಂಬಿತರೊಬ್ಬರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಬೇಕು. ಅವರ ಕುಟುಂಬಕ್ಕೆ 50 ಲಕ್ಷ ರೂ. ನೀಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ. ಶಾರದಮ್ಮ, ವಿಶಾಲಾಕ್ಷಿ, ಆವರಗೆರೆ ಚಂದ್ರು, ಆವರಗೆರೆ ವಾಸು ಇದ್ದರು.

error: Content is protected !!