ದಾವಣಗೆರೆ, ಸೆ.10- ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯ 30ನೇ ವಾರ್ಡ್ ಆವರಗೆರೆಯ ಚಿಕ್ಕನಹಳ್ಳಿ ಬಡಾವಣೆಯ ಮನೆಗಳಿಗೆ ನೀರು ನುಗ್ಗಿ ಹಾನಿಗೀಡಾದ ಸ್ಥಳಕ್ಕೆ ಪಾಲಿಕೆ ಮಹಾಪೌರರಾದ ಬಿ.ಜಿ.ಅಜಯ್ ಕುಮಾರ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಅಲ್ಲಿನ ರಾಜ ಕಾಲುವೆಯ ಮೇಲೆ ಸೇತುವೆ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪ್ರಾರಂಭ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳೀಯ ನಾಗರಿಕರು ಕುಡಿಯುವ ನೀರಿನ ತೊಂದರೆ ಬಗ್ಗೆ ತಿಳಿಸಿದರು. ಕೂಡಲೇ ಸ್ಥಳದಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿದರು. ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಜಯಮ್ಮ ಗೋಪಿ ನಾಯ್ಕ್, ಎಸ್.ಟಿ.ವೀರೇಶ್, ಪಾಲಿಕೆಯ ಅಭಿಯಂತರರು, ಆರೋಗ್ಯ ಅಧಿಕಾರಿಗಳು ಮತ್ತು ಇತರರು ಮೇಯರ್ ಅವರೊಂದಿಗಿದ್ದರು.
February 26, 2025