ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಯೋಗ ಒಕ್ಕೂಟ ಹಾಗೂ ವಿವಿಧ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮಂಗಳವಾರ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ರಿಂಗ್ ರಸ್ತೆಯ ಕ್ಲಾಕ್ ಟವರ್ ಬಳಿ ಜಾಥಾಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ನಾಗರಾಜ್ ಜಾಲನೆ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ರಾಘವನ್, ಯೋಗ ಒಕ್ಕೂಟದ ವಾಸುದೇವ ರಾಯ್ಕರ್ ಇತರರು ಈ ಸಂದರ್ಭದಲ್ಲಿದ್ದರು.
January 20, 2025