ಜಗಳೂರು, ಏ.10- ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕು ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಇಂದು ದಿಢೀರನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಅಲ್ಲಿನ ಭದ್ರತಾ ಕೊಠಡಿ, ನಾಳೆ ನಡೆಯುವ ಮತಗಟ್ಟೆ ಅಧಿಕಾರಿಗಳ ತರಬೇತಿಯ ಕೊಠಡಿಯನ್ನು ಪರಿಶೀಲನೆ ನಡೆಸಿ ಚುನಾವಣಾ ಅಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಚುನಾವಣೆಯ ಪೂರ್ವಭಾವಿ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಯಾವುದೇ ಲೋಪ ದೋಷಗಳಿಲ್ಲದಂತೆ ಶಾಂತಿಯುತ ವಾಗಿ ಚುನಾವಣೆ ನಡೆಸಲು ತಿಳಿಸಿದರು.
ನಂತರ ಬಿದರಕೆರೆಯ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಚುನಾವಣಾ ಸಂಬಂಧ ವಾಹನಗಳನ್ನು ಕಟ್ಟುನಿಟ್ಟಿನಿಂದ ಪರಿಶೀಲನೆ ನಡೆಸಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಅಲ್ಲಿನ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಚುನಾವಣೆ ಅಧಿಕಾರಿ
ಎಸ್. ರವಿ, ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀ ಲ್ದಾರ್ ಸಂತೋಷ್ ಕುಮಾರ್ ಜಿ, ಪ.ಪಂ ಮುಖ್ಯಧಿಕಾರಿ ಲೋಕ್ಯಾ ನಾಯ್ಕ.ಆರ್. ಐ, ಕುಬೇರ್ ನಾಯ್ಕ. ಬಿ ಆರ್, ಸಿ ಹಾಲೇಶಪ್ಪ ಮತ್ತು ಸಿಬ್ಬಂದಿಗಳು ಹಾಜರಿದ್ದರು.