ಕೊಟ್ಟೂರು : ಕಾಲ್ನಡಿಗೆಯಲ್ಲಿ ಮತದಾನ ಜಾಗೃತಿ

ಕೊಟ್ಟೂರು : ಕಾಲ್ನಡಿಗೆಯಲ್ಲಿ ಮತದಾನ ಜಾಗೃತಿ

ಕೊಟ್ಟೂರು, ಏ. 13 – ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ, ತಾಲ್ಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಮತದಾನ ಅಭಿಯಾ ನದ ಅಂಗವಾಗಿ ಉಜ್ಜಿನಿ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ಕಾಲ್ನಡಿಗೆ ಜಾಗೃತಿ ಜಾಥಾ ನಡೆಸಲಾಯಿತು.

ಮಂಗಳವಾರ ಸಂಜೆ ಕಾಲ್ನಡಿಗೆ ಜಾಥಾಕ್ಕೆ ತಹಸೀಲ್ದಾರ್ ಎಂ.ಕುಮಾರಸ್ವಾಮಿ ಅವರು ಚಾಲನೆ ನೀಡಿದ್ದರು. ಬಳಿಕ ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.

ಮತದಾನ ಮಾಡುವುದು ಪ್ರತಿಯೊಬ್ಬ ಮತದಾರನ ಆದ್ಯ ಕರ್ತವ್ಯವಾಗಿದೆ. ಮತದಾನದ ದಿನದಂದು ತಪ್ಪದೇ ಮತ ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯಬಾರದು. ದೇಶದ ಉಜ್ವಲ ಭವಿಷ್ಯಕ್ಕಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಹೇಳಿದರು.

 ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಸುರುಲ್ಲಾ ಮಾತನಾಡಿದರು. ಪಟ್ಟಣದ ಗಾಂಧಿ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.  

ಈ ಸಂದರ್ಭದಲ್ಲಿ ಪಿಎಸ್ ಐ ವೆಂಕಟೇಶ್. ತಾಲ್ಲೂಕು ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಮೈದೂರು ಶಶಿಧರ್, ಮ್ಯಾನೇಜರ್ ಪುಷ್ಪಲತಾ,  ಸ್ವ ಸಹಾಯ ಸಂಘದ ಸದಸ್ಯರಾದ ಭಾಗ್ಯಲಕ್ಷ್ಮಿ, ಅನ್ನಪೂರ್ಣ ಬೋಸ್, ಚಂಪಾಕ್ಷಿ, ಪೂರ್ಣಿಮ, ಹಾಗು ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಅನ್ನಪೂರ್ಣಮ್ಮ, ಆಶಾಕಾರ್ಯಕರ್ತರು, ಧರ್ಮಸ್ಥಳ ಮಹಿಳಾ ಸಂಘದ ಸದಸ್ಯರು ವಿಕಲಚೇತನರು, ಪಟ್ಟಣ ಪಂಚಾಯಿತಿ ಸಿಬ್ಬಂದಿ, ಪೌರಕಾರ್ಮಿಕರು, ತಾಲ್ಲೂಕು ಆಡಳಿತ ಕಚೇರಿಯ ಸಿಬ್ಬಂದಿ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

error: Content is protected !!