ಮಹಿಳಾ ಕಾಲೇಜಿನಲ್ಲಿ ಮತದಾನ ಜಾಗೃತಿ ಜಾಥಾ

ಮಹಿಳಾ ಕಾಲೇಜಿನಲ್ಲಿ ಮತದಾನ ಜಾಗೃತಿ ಜಾಥಾ

ದಾವಣಗೆರೆ, ಏ.13  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ  ಮತದಾನ ಸಾಕ್ಷರತಾ ಕ್ಲಬ್, ರೇಂಜರ್ಸ್‌ ಘಟಕ, ರಾಷ್ಟ್ರೀಯ ಸೇವಾ ಘಟಕದ ಸಹಯೋಗದೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ಎಂ ನೆಲವಿಗಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಶೈಲಜಾ  ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಕಾಲೇಜಿನ ರೇಂಜರ್ಸ್ ಲೀಡರ್ ಡಾ.ಸಿದ್ದಲಿಂಗಮ್ಮ  ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಯುವ ಸ್ಪಂದನ ಕಾರ್ಯಕ್ರಮದ ಕ್ಷೇತ್ರ ಸಂಯೋಜಕ  ನಾಗರಾಜ್, ಯುವ ಪರಿವರ್ತಕ ಜಿ. ರಮೇಶ್, ಹಾಗೂ ಕಾಲೇಜಿನ ಬೋಧಕ ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!