ಆಪ್ ಪಕ್ಷದಿಂದ ನಾಮಪತ್ರ ಸಲ್ಲಿಕೆ

ಆಪ್ ಪಕ್ಷದಿಂದ ನಾಮಪತ್ರ ಸಲ್ಲಿಕೆ

ಹರಿಹರ, ಏ. 17- ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಮ್ಮ್ ಆದ್ಮಿ ಪಕ್ಷದಿಂದ ನಾಡಿದ್ದು ದಿನಾಂಕ 19 ರ ಬುಧವಾರ ಬೆಳಿಗ್ಗೆ ನಾಮಪತ್ರವನ್ನು ಸಲ್ಲಿಸಲಾಗುತ್ತದೆ ಎಂದು ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಗಣೇಶ ದುರ್ಗದ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆಮ್ ಆದ್ಮಿ ಪಕ್ಷವು ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದ್ದು, ದೇಶದ ಹಲವಾರು ರಾಜ್ಯಗಳ ಈಗಾಗಲೇ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅದರಂತೆ ಕರ್ನಾಟಕದಲ್ಲಿ ಕೂಡ ಆಮ್ ಆದ್ಮಿ ಪಕ್ಷ ಹೆಚ್ಚಿನ ಪ್ರಮಾಣದಲ್ಲಿ ಶಾಸಕರು ಗೆದ್ದು ರಾಜ್ಯದಲ್ಲಿ ಸರ್ಕಾರ ರಚಿಸುವ ಹಂತದಲ್ಲಿ ಸಾಗಿದೆ ಎಂದರು.

ಇದೇ ದಿನಾಂಕ 19 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪಕ್ಕೀರಸ್ವಾಮಿ ಮಠದ ಆವರಣದಿಂದ ಬೃಹತ್ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಲಾಗುತ್ತದೆ ಎಂದು ಅವರು ಹೇಳಿದರು. ಆಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ಚಂದ್ರು ಬಸವಂತಪ್ಪ ಮಾತನಾಡಿದರು. 

ಈ ಸಂದರ್ಭದಲ್ಲಿ  ಅರುಣ್ ಕುಮಾರ್, ರವೀಂದ್ರ ಕೆ, ಸಮೀರ್ ಹಸನ್, ಹಾಲಸ್ವಾಮಿ, ಹಾಜಿ ಖಾನ್ , ಬಸವರಾಜ್ ಹಲಸಬಾಳು ಹಾಗೂ ಇತರರು ಹಾಜರಿದ್ದರು.

error: Content is protected !!