ಹರಿಹರ, ಏ. 18 – ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಪಂ ಇಓ ರವಿ, ಬಿಇಓ ಹನುಮಂತಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಕೆ. ಭೂಮೇಶ್, ಡಾ. ಸಿದ್ದೇಶ್, ತೋಟಗಾರಿಕೆ ಇಲಾಖೆ ರೇಖಾ, ಸಿಡಿಪಿಓ ಪೂರ್ಣಿಮಾ ಮತ್ತಿತರರು ಹಾಜರಿದ್ದರು.
January 7, 2025