ದಾವಣಗೆರೆ, ಮೇ 6- ನಗರದ ವಿನೂತನ ಮಹಿಳಾ ಸಮಾಜದಿಂದ ಕಾರ್ಮಿಕರ ದಿನಾಚರಣೆಯನ್ನು ಕಾರ್ಮಿಕ ಮಹಿಳೆಯರನ್ನು ಸನ್ಮಾನಿಸುವುದರ ಮೂಲಕ ಆಚರಿಸಲಾಯಿತು.
ವಿನೂತನ ಮಹಿಳಾ ಸಮಾಜದ ಅಧ್ಯಕ್ಷರಾದ ಶ್ರೀಮತಿ ಚಂದ್ರಿಕಾ ಮಂಜುನಾಥ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಶ್ರೀಮತಿ ಮೈತ್ರಾದೇವಿ ಮಾತನಾಡಿ, ಮಹಿಳೆಯರಿಗೆ ಪೌಷ್ಟಿಕ ಮತ್ತು ಸಮತೋಲನ ಆಹಾರದ ಬಗ್ಗೆ ಮಾಹಿತಿ ಕೊಟ್ಟರು.
ಕಾರ್ಯಕ್ರಮದಲ್ಲಿ, ಜೀವನದಲ್ಲಿ ಕಷ್ಟಪಟ್ಟು ದುಡಿಯುತ್ತಿರುವ ಮೂವರು ಮಹಿಳಾ ಕಾರ್ಮಿಕರನ್ನು ಗುರುತಿಸಿ ಸನ್ಮಾನಿಸಲಾಯಿತು.
ಶ್ರೀಮತಿ ಜ್ಯೋತಿ ಜಯಪ್ಪ ಪ್ರಾಯೋಜಿಸಿದ ಕಾರ್ಯಕ್ರಮವನ್ನು ಶ್ರೀಮತಿ ಪುಷ್ಪಾ ಬಸವರಾಜ್ ನಿರೂಪಿಸಿದರು.